ಭೋರ್ಗರೆಯುತ್ತಿರುವ ಅಬ್ಬಿ ಜಲಪಾತ...
[Updated 16/07/2012 12:31 pm ][Author: ]ಬಿ.ಎಂ.ಲವಕುಮಾರ್, ಕಗ್ಗೋಡ್ಲು
ಕೊಡಗಿನಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆಯೇ ನಿಸರ್ಗ ಹಸಿರ ಹೊದಿಕೆಯನ್ನೊದ್ದು ಥಳಥಳಿಸುತ್ತಿದ್ದರೆ ಬೆಟ್ಟದ ಮೇಲಿನ ಗುಡ್ಡದ ಕೆಳಗಿನ ಹೆಬ್ಬಂಡೆಗಳ ಮೇಲೆ ಜಲಪಾತಗಳು ಮೈಕೈ ತುಂಬಿಕೊಂಡ ಬೆಡಗಿಯರಂತೆ ವಯ್ಯಾರದಿಂದ ಬಳುಕುತ್ತವೆ.
ಕೊಡಗಿನಲ್ಲಿ ಹಲವಾರು ರುದ್ರರಮಣೀಯ ಜಲಪಾತಗಳಿವೆ. ಇವುಗಳ ಪೈಕಿ ಮಡಿಕೇರಿ ಬಳಿಯಿರುವ ಕೆ.ನಿಡುಗಣೆ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ಅಬ್ಬಿ ಜಲಪಾತ ಒಂದಾಗಿದ್ದು, ಮಡಿಕೇರಿಗೆ ಸಮೀಪವಿರುವುದರಿಂದ ಪ್ರಮುಖ ಪ್ರವಾಸಿ ತಾಣವಾಗಿ ಸಾವಿರಾರು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಸಾಮಾನ್ಯವಾಗಿ ಕೊಡಗಿನಲ್ಲಿ ಮಳೆ ಬೀಳುತ್ತಿದ್ದಂತೆಯೇ ಬೇಸಿಗೆಯ ಬಿಸಿಲಿಗೆ ಸೊರಗಿ ಹೆಬ್ಬಂಡೆಯ ಮಧ್ಯೆ ಅದೃಶ್ಯವಾಗಿ ಹೋದ ಎಲ್ಲಾ ಜಲಧಾರೆಗಳು ಮರುಜೀವ ಪಡೆಯುತ್ತವೆ. ಈ ಸಂದರ್ಭ ನೋಡಿದರೆ ಹೆಬ್ಬಂಡೆಯ ಮೇಲೆ ಬೆಳ್ಳಿ ಕರಗಿ ಸುರಿಯುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಹಾಗೆನೋಡಿದರೆ ಮಡಿಕೇರಿಯಲ್ಲಿ ಮಳೆ ಸುರಿದರೆ ಅಬ್ಬಿ ಜಲಪಾತ ಭೋರ್ಗರೆಯುತ್ತದೆ. ಅದಕ್ಕೆ ಕಾರಣವೂ ಇದೆ ಮಡಿಕೇರಿಯಲ್ಲಿ ಬಿದ್ದ ಮಳೆನೀರೆಲ್ಲಾ ಒಟ್ಟಾಗಿ ಹರಿದು ಈ ಜಲಪಾತವನ್ನು ಸೇರುತ್ತದೆ. ಮೋಹಕ ಜಲಪಾತ: ಮಡಿಕೇರಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಅಬ್ಬಿ ಜಲಪಾತ ನಿಜಕ್ಕೂ ಒಂದು ಮೋಹಕ ಜಲಪಾತವೇ... ಈ ಜಲಪಾತವನ್ನು ನೋಡಲು ತೆರಳುವವರಿಗೆ ಮಡಿಕೇರಿಯಿಂದ ಜಲಪಾತದವರೆಗೆ ಯಾವುದೇ ಬಸ್ ಸೌಕರ್ಯವಿಲ್ಲ. ಹಾಗಾಗಿ ಮಡಿಕೇರಿಯಿಂದ ಬಾಡಿಗೆಗೆ ಆಟೋ, ಜೀಪು ಅಥವಾ ಸ್ವಂತ ವಾಹನಗಳಲ್ಲಿ ತೆರಳಬಹುದು.




ನಡೆದೇ ಹೋಗುವುದಾದರೆ ಅದರ ಮಜಾವೇ ಬೇರೆ... ಅಂಕುಡೊಂಕಾದ ರಸ್ತೆಯಲ್ಲಿ ಕಾಡು, ಕಾಫಿ, ಏಲಕ್ಕಿ ತೋಟದ ನಡುವೆ ಹೆಜ್ಜೆ ಹಾಕುತ್ತಾ ಮುನ್ನಡೆಯುತ್ತಿದ್ದರೆ ದಾರಿ ಸಾಗುವುದೇ ಗೊತ್ತಾಗುವುದಿಲ್ಲ. ಇನ್ನೇನು ಕೆಲವೇ ಕಿ.ಮೀ. ಅಂತರಗಳಲ್ಲಿ ಜಲಪಾತ ಇದೆ ಎನ್ನುವುದು ಭೋರ್ಗರೆಯುವ ಸದ್ದಿಗೆ ಗೊತ್ತಾಗಿ ಬಿಡುತ್ತದೆ. ಗುಡ್ಡದಲ್ಲಿ ತೋಟದ ನಡುವೆ ರಭಸದಿಂದ ಭೋರ್ಗರೆಯುತ್ತಾ ಹರಿಯುವ ನದಿ ನಮಗೆ ರಸ್ತೆಯಿಂದಲೇ ಕಾಣಸಿಗುತ್ತದೆ. ಅಲ್ಲಿಂದ ಮುಂದೆ ಇಳಿಜಾರು ರಸ್ತೆಯಲ್ಲಿ ಸಾಗಿದರೆ ನಮಗೆ ಸಮತಟ್ಟಾದ ವಾಹನ ನಿಲುಗಡೆಯ ಸ್ಥಳ ಕಾಣಸಿಗುತ್ತದೆ. ಅಲ್ಲಿಂದ ಎಡಕ್ಕೆ ಕಾಫಿ ತೋಟದ ಮಧ್ಯೆ ನಡೆಯುತ್ತಾ ಹೋದರೆ ಜಲಪಾತದ ಭೋರ್ಗರೆತ ಕಿವಿಗೆ ಬಡಿಯುತ್ತದೆ. ಆ ನಂತರ ಕೆಳಕ್ಕೆ ಮೆಟ್ಟಿಲುಗಳನ್ನು ಇಳಿಯುತ್ತಾ ಹೋದರೆ ಅಬ್ಬಿ ಜಲಪಾತದ ಸನಿಹಕ್ಕೆ ಹೋಗಬಹುದು. ವಿಶಾಲ ಬಂಡೆಗಳ ನಡುವೆ ಸುಮಾರು ಎಂಬತ್ತು ಅಡಿಯಷ್ಟು ಎತ್ತರದಿಂದ ಧುಮುಕುತ್ತಾ ತನ್ನ ವೈಭವವನ್ನು ಪ್ರದರ್ಶಿಸುವ ಜಲಪಾತವನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲಿಯೂ ಮಳೆಗಾಲದಲ್ಲಿ ಇದರ ರೌದ್ರಾವತಾರವನ್ನು ಹತ್ತಿರದಿಂದ ನೋಡಿದರೆ ಆ ಸುಂದರ ಕ್ಷಣಗಳನ್ನು ಖಂಡಿತಾ ಮರೆಯಲಾರರು. ಜಲಪಾತದ ಸೊಬಗನ್ನು ಹತ್ತಿರದಿಂದ ಸವಿಯಲೆಂದೇ ಇತ್ತೀಚೆಗೆ ಅಡ್ಡಲಾಗಿ ತೂಗು ಸೇತುವೆಯನ್ನು ನಿಮರ್ಿಸಲಾಗಿದೆ. ಇದರಲ್ಲಿ ನಿಂತು ಜಲಪಾತದ ಸೌಂದರ್ಯವನ್ನು ಮನದಣಿಯೆ ಸವಿಯಬಹುದು.
ಈ ಜಲಪಾತ ನೆರವಂಡ ನಾಣಯ್ಯ ಎಂಬುವರ ಕಾಫಿ, ಏಲಕ್ಕಿ ತೋಟಗಳ ನಡುವೆ ನಿರ್ಮಿತಗೊಂಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಇಲ್ಲಿಗೆ ಭೇಟಿ ನೀಡಿದ ಬ್ರಿಟೀಷರು ಇದರ ಸೌಂದರ್ಯವನ್ನು ನೋಡಿ ಆನಂದಪಟ್ಟು ಕೊಡಗಿನ ಪ್ರಥಮ ಧರ್ಮಗುರುಗಳ ಮಗಳು ಜೆಸ್ಸಿಯ ಹೆಸರನ್ನು ಈ ಫಾಲ್ಸ್ಗೆ ಇಟ್ಟು ಜೆಸ್ಸಿ ಫಾಲ್ಸ್ ಎಂದು ಕರೆದಿದ್ದರು. ಆದರೆ ಸ್ಥಳೀಯರು ಹಿಂದೆ ಇದನ್ನು ಮಡಿಕೇರಿ ತೊರೆ, ಮುತ್ತಾರ್ಮುಟ್ಟು ತೊರೆ ಎಂದು ಕರೆಯುತ್ತಿದ್ದರು ಎನ್ನಲಾಗಿದೆ. ಕೊಡವ ಭಾಷೆಯಲ್ಲಿ ಅಬ್ಬಿ ಎಂದರೆ ತೊರೆ ಎಂದರ್ಥ ಕೊಡವ ಭಾಷೆಯ ಅಬ್ಬಿ ಇಂದು ಅಬ್ಬಿ ಫಾಲ್ಸ್ ಆಗಿದೆ. ಮಳೆಗಾಲದಲ್ಲಿ ಕುಂಬದ್ರೋಣ ಮಳೆ ಸುರಿದು ನದಿ ಉಕ್ಕಿಹರಿದಾಗ ಜಲಪಾತ ರೌದ್ರಾವತಾರ ತಾಳುತ್ತದೆ. ಈ ಸಂದರ್ಭ ಅತ್ತ ತೆರಳುವುದು ಅಪಾಯಕಾರಿ. ಅಲ್ಲದೆ ರಕ್ತ ಹೀರುವ ಜಿಗಣೆಗಳು ಜಲಪಾತವನ್ನು ನೋಡುವ ಪ್ರವಾಸಿಗರ ಉತ್ಸಾಹಕ್ಕೆ ತಣ್ಣೀರು ಎರಚಿಬಿಡುತ್ತವೆ. ಹಾಗಾಗಿ ಮುಂಗಾರು ಆರಂಭ ಹಾಗೂ ಸೆಪ್ಟಂಬರ್ ನಂತರದ ದಿನಗಳು ಜಲಪಾತ ವೀಕ್ಷಣೆಗೆ ಅನುಕೂಲ.
ಅನಾಹುತಕಾರಿ ಜಲಪಾತ: ಅಬ್ಬಿ ಜಲಪಾತ ನೋಡಲು ಎಷ್ಟೊಂದು ಸುಂದರವಾಗಿದೆಯೋ ಅಷ್ಟೇ ಅನಾಹುತ ಕಾರಿಯೂ ಆಗಿದೆ ಎಂಬುವುದು ಬಹಳಷ್ಟು ಜನಕ್ಕೆ ಗೊತ್ತಿಲ್ಲ. ಬೇಸಿಗೆಯ ದಿನಗಳಲ್ಲಿ ಜಲಪಾತದಲ್ಲಿ ನೀರಿನ ಭೋರ್ಗರೆತ ಕಡಿಮೆಯಾದಾಗ ಹೆಚ್ಚಿನ ಪ್ರವಾಸಿಗರು ಜಲಧಾರೆಯಾಗಿ ಧುಮುಕಿ ಬಳಿಕ ನದಿಯಾಗಿ ಹರಿದು ಹೋಗುವ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಜಲಪಾತದಿಂದ ಸ್ವಲ್ಪ ದೂರದಲ್ಲಿ ತೂಗುಸೇತುವೆಯ ಕೆಳಭಾಗದಲ್ಲಿ ಸ್ನಾನ ಮಾಡಿದರೆ ಅಥವಾ ಹರಿಯುವ ನೀರಿನಲ್ಲಿ ಆಟವಾಡಿದರೆ ತೊಂದರೆಯಿಲ್ಲ. ಆದರೆ ಕೆಲವರು ಜಲಪಾತದ ಬಳಿ ಹಾಕಲಾಗಿರುವ ಎಚ್ಚರಿಕೆಯ ನಾಮಫಲಕವನ್ನೂ ಗಮನಿಸದೆ ನೇರವಾಗಿ ಜಲಪಾತದ ತಳಭಾಗಕ್ಕೆ ತೆರಳಿ ಧುಮುಕುವ ಜಲಧಾರೆಗೆ ತಲೆಕೊಟ್ಟು ಸ್ನಾನಮಾಡುವ ಸಾಹಸ ಮಾಡುತ್ತಾರೆ. ಇದು ಎಷ್ಟೊಂದು ಅಪಾಯಕಾರಿ ಎಂಬುವುದಕ್ಕೆ ಇದುವರೆಗೆ ಇಲ್ಲಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಸುಮಾರು 52 ಮಂದಿ ಸಾಕ್ಷಿಯಾಗುತ್ತಾರೆ. ಇನ್ನು ಕೊಡಗಿಗೆ ಬರುವ ದೂರದ ಪ್ರವಾಸಿಗರಿಗೆ ಇಲ್ಲಿ ಹರಿಯವ ನೀರೆಲ್ಲಾ ಕಾವೇರಿ ನೀರು ಎಂಬ ನಂಬಿಕೆ. ಹಾಗಾಗಿ ಅಬ್ಬಿಜಲಪಾತಕ್ಕೆ ಭೇಟಿ ನೀಡುವ ಪ್ರವಾಸಿಗರು ಕೂಡ ಜಲಪಾತದಲ್ಲಿ ಸ್ನಾನ ಮಾಡುವುದು ಪವಿತ್ರ ಎಂದುಕೊಳ್ಳುತ್ತಾರೆ.
ಅಷ್ಟೇ ಅಲ್ಲ ಈ ನೀರನ್ನು ಕೆಲವರು ಪವಿತ್ರ ತೀರ್ಥ ಎಂದು ತಮ್ಮೊಂದಿಗೆ ಕೊಂಡೊಯ್ಯವ ಪ್ರಯತ್ನವನ್ನು ಮಾಡುತ್ತಾರೆ. ದಯವಿಟ್ಟು ಇಲ್ಲಿ ಪ್ರವಾಸಿಗರು ಗಮನಿಸಬೇಕಾಗಿರುವುದೇನೆಂದರೆ ಮಡಿಕೇರಿ ನಗರದ ಸಮಸ್ತ ಕೊಳಚೆ ನೀರು ಹರಿದು ಬಂದು ಇದೇ ಜಲಪಾತದಲ್ಲಿ ಧುಮುಕುತ್ತದೆ. ಈ ಕೊಳಚೆ ನೀರಿಗೆ ಹಲವು ನದಿ ತೊರೆಗಳು ಸೇರುವುದರಿಂದ ಜಲಪಾತವನ್ನು ತಲುಪುವ ವೇಳೆಗೆ ನೀರು ಶುದ್ಧವಾಗಬಹುದು ಆದರೂ ಎಚ್ಚರವಾಗಿರುವುದು ಒಳಿತು. ಇನ್ನಾದರೂ ಪ್ರವಾಸಿಗರು ಅಬ್ಬಿಜಲಪಾತದ ಸೌಂದರ್ಯವನ್ನು ದೂರದಿಂದಲೇ ನೋಡಿ ಹಿಂತಿರುಗಿದರೆ ಅಷ್ಟೇ ಸಾಕು.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ನಾನು ಮುಗ್ದ, ಯಾವುದೇ ತಪ್ಪು ಮಾಡಿಲ್ಲ: ಶ್ರೀಶಾಂತ್
ಹೊಸದಿಲ್ಲಿ: ನಾನು ಮುಗ್ದ ಮತ್ತು ಯಾವುದೇ ತಪ್ಪನ್ನು ಮಾಡಿಲ್ಲ. ನಾನು ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿಲ್ಲ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡ...
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಂಜಯ್ ದತ್ ಪುಣೆಯ ಯೆರವಾಡ ಜೈಲಿಗೆ
ಮುಂಬಯಿ: 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ನ್ನು ಪುಣೆಯ ಯೆರವಾಡ ಜೈಲಿಗೆ ಸ್ಥಳಾಂತರಿಸಲಾಗಿದೆ. ಮೇ 16ರಂದು ದತ್ ವಿಶೇಷ ಟಾಡಾ ಕೋರ್ಟ್ ಮುಂದೆ ಶರಣಾಗಿದ್ದರು.
ಚೆನ್ನೈ ಪೊಲೀಸರ ದಾಳಿ: 6 ಮಂದಿ ಬುಕ್ಕಿಗಳ ಸೆರೆ
ಚೆನ್ನೈ: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ನ ಮೂರು ಮಂದಿ ಆಟಗಾರರು ಸಿಕ್ಕಿಬಿದ್ದ ಮರುದಿನ ಚೆನ್ನೈ ಪೊಲೀಸರು 10 ಕಡೆಗಳಲ್ಲಿ ದಾಳಿ ಮಾಡಿ 6 ಮಂದಿ ಬುಕ್ಕಿಗಳನ್ನು ಬಂಧಿಸಿದ್ದಾರೆ.
ದೆಹಲಿಯಲ್ಲಿ ವೈದ್ಯನಿಂದ ರೋಗಿಯ ಅತ್ಯಾಚಾರ
ಹೊಸದಿಲ್ಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಯ 51ರ ಹರೆಯದ ವೈದ್ಯ ತನ್ನ ಕ್ಲಿನಿಕ್ ನಲ್ಲಿ 21ರ ಹರೆಯದ ರೋಗಿಯೊಬ್ಬಳನ್ನು ಅತ್ಯಾಚಾರ ಮಾಡಿದ ಪ್ರಕರಣ ನಡೆದಿದೆ. ದೆಹಲಿಯ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಯಲ್ಲಿ
ದೆಹಲಿಯಲ್ಲಿ 12ನೇ ತರಗತಿ ಬಾಲಕಿಯ ಗುಂಡಿಕ್ಕಿ ಹತ್ಯೆ
ಹೊಸದಿಲ್ಲಿ: ದಕ್ಷಿಣ ದೆಹಲಿಯಲ್ಲಿ 12ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹುಡುಗನೊಬ್ಬ ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಮುನಿಕ್ರಾ ಪ್ರದೇಶದ ಬುಧ ವಿಹಾರ್ ಪ್ರದೇಶದಲ್ಲಿರುವ
ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮುಂಬಯಿ: ಮಹಾರಾಷ್ಟ್ರದ ಬಿಜೆಪಿಯ ಎಂಎಲ್ ಸಿ ಮಧು ಚೌವಾಣ್ ತನ್ನ ಪಕ್ಷದ ಮಾಜಿ ಕಾರ್ಯಕರ್ತೆಯನ್ನು ಅತ್ಯಾಚಾರ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ.
ಮಧು ಚೌವಾಣ್ ವಿರುದ್ಧ ಮುಂಬಯಿ ಪೊಲೀಸರು
ಹಲ್ಲೆಗೊಳಗಾಗಿದ್ದ ಪಾಕ್ ಕೈದಿ ಸಾವು
ಚಂಡೀಗಡ: ಜಮ್ಮು ಜೈಲಿನಲ್ಲಿ ಕಳೆದ ವಾರ ಸಹ ಕೈದಿಗಳಿಂದ ಹಲ್ಲೆಗೊಳಗಾಗಿದ್ದ ಪಾಕಿಸ್ತಾನದ ಕೈದಿ ಸಾನುಲ್ಲಾ ರಂಜಾಯ್ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಹತ್ಯೆ ಪ್ರಕರಣ: ತಲ್ವಾರ್ ದಂಪತಿ ಹೇಳಿಕೆ ದಾಖಲಿಸಲು ಕೋರ್ಟ್ ಆದೇಶ
ಘಜಿಯಾಬಾದ್: ಆರುಷಿ-ಹೇಮರಾಜ್ ಹತ್ಯಾ ಪ್ರಕರಣದಲ್ಲಿ ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯವು ರಾಜೇಶ್ ಮತ್ತು ನುಪುರ್ ತಲ್ವಾರ್ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.
ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ದೇಹದ ಮೇಲಿತ್ತು ಕಚ್ಚಿದ ಗುರುತು!
ಹೊಸದಿಲ್ಲಿ: ಕಳೆದ ವರ್ಷ ಡಿಸೆಂಬರ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಇಬ್ಬರು ಕಚ್ಚಿದ ಗುರುತುಗಳಿದ್ದವು ಎಂದು ಹೇಳಲಾಗಿದೆ. ಈ ಎರಡು ಗುರುತುಗಳು
ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ, ಕಚೇರಿಗೆ ಐಟಿ ದಾಳಿ
ಮುಂಬಯಿ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ ಹಾಗೂ ಕಚೇರಿಗೆ ದಾಳಿ ಮಾಡಿದ್ದಾರೆ. ಕಿರುತೆರೆಯಲ್ಲಿ ತನ್ನ ಧಾರಾವಾಹಿಗಳಿಂದ ಹೆಚ್ಚಿನ ಪ್ರಚಾರವನ್ನು ಪಡೆದುಕೊಂಡಿರುವ
ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆತಂದ ಬಿಹಾರದ ಕಾಂಗ್ರೆಸ್ ಶಾಸಕ
ಪಟ್ನಾ: ಜನರಿಗೆ ಮೂಲಭೂತ ಸೌಲಭ್ಯಗಳಿಲ್ಲದಿದ್ದರೂ ನಮ್ಮ ರಾಷ್ಟ್ರದ ಎಲ್ಲಾ ರಾಜ್ಯಗಳ ಶಾಸಕರು ತಮ್ಮ ಶ್ರೀಮಂತಿಕೆಯನ್ನು ತೋರಿಸುವುದರಲ್ಲಿ ಹಿಂದೆ ಬಿದ್ದಿಲ್ಲ. ಬಿಹಾರದಲ್ಲಿ ಕಾಂಗ್ರೆಸ್ ನ ಶಾಸಕನೊಬ್ಬ ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆದುಕೊಂಡು ಬಂದಿದ್ದಾನೆ.

Write Your Comment Here...