ಛಾಯಾಗ್ರಾಹಕ ದೃಶ್ಯಗಳಿಗೆ ಜೀವ ತುಂಬುವ ಕಲೆಗಾರ
[Updated 19/08/2012 10:52 am ][Author: ]ಬಿ.ಎಂ.ಲವಕುಮಾರ್
ಒಂದು ಪುಟದಲ್ಲಿ ಹೇಳುವ ವಿಚಾರವನ್ನು ಒಂದೇ ಒಂದು ಫೋಟೋ ಹೇಳಿ ಬಿಡುತ್ತದೆ. ಅಷ್ಟೇ ಅಲ್ಲ ಆ ಫೋಟೋದಲ್ಲಿ ಸೆರೆಯಾದ ಸುಂದರ ದೃಶ್ಯ ಮನಪಟಲದಲ್ಲಿ ಅಚ್ಚೊತ್ತಿದಂತೆ ಉಳಿದು ಬಿಡುವುದರೊಂದಿಗೆ ಆಗಾಗ್ಗೆ ಕಣ್ಮುಂದೆ ಹರಿದಾಡುತ್ತಿರುತ್ತದೆ. ಇಂದಿನ ದಿನದಲ್ಲಿ ಛಾಯಾಗ್ರಾಹಕರಿಲ್ಲದ ಸಭೆ, ಸಮಾರಂಭವನ್ನು ನೆನಪಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ದಿನನಿತ್ಯದ ಎಲ್ಲಾ ಚಟುವಟಿಕೆಯಲ್ಲಿ ಛಾಯಾಗ್ರಾಹಕನ ಅಗತ್ಯತೆ ಇದ್ದೇ ಇರುತ್ತದೆಯಾದರೂ ಅದರಲ್ಲೂ ಮಾಧ್ಯಮ ಕ್ಷೇತ್ರದಲ್ಲಂತೂ ಛಾಯಾಗ್ರಾಹಕನಿಲ್ಲದೆ ಕಾರ್ಯವೇ ಇಲ್ಲ ಎನ್ನಬಹುದು. ಯಾವುದೇ ಸುದ್ದಿಯಾಗಿರಬಹುದು ಅದು ಮೇಲ್ನೋಟದಲ್ಲಿಯೇ ನಮ್ಮನ್ನು ಆಕರ್ಷಿಸಬೇಕಾದರೆ ಜೊತೆಗೊಂದು ಸುಂದರ ಫೋಟೋ ಬೇಕೇ ಬೇಕು.
ಛಾಯಾಗ್ರಾಹಕರಿಗೆ ಸಂಭ್ರಮದ ದಿನ: ಎಲ್ಲರಿಗೂ ಒಂದು ದಿನವಿರುವಂತೆ ಆಗಸ್ಟ್ 19ನ್ನು ವಿಶ್ವ ಛಾಯಾಗ್ರಾಹಕರ ದಿನವನ್ನಾಗಿ ವಿಶ್ವದ ಎಲ್ಲಡೆ ಆಚರಿಸಲಾಗುತ್ತಿದೆ. ಅಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಛಾಯಾಗ್ರಾಹಕರು ಸಂತಸ, ಸಂಭ್ರಮಪಡುತ್ತಾರೆ. ಜೊತೆಗೆ ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಧನೆಗೈದ ಛಾಯಾಗ್ರಾಹಕರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಪ್ರೋತ್ಸಾಹಿಸಲಾಗುತ್ತದೆ. ನಮ್ಮ ನಡುವೆ ನೂರಾರು ಮಂದಿ ಫೋಟೋಗ್ರಾಫರ್ ಗಳಿದ್ದರೂ ಅವರನ್ನೆಲ್ಲಾ ಫೋಟೋಗ್ರಾಫರ್ ಎಂದು ಒಪ್ಪಿಕೊಳ್ಳಲಾಗದು. ಏಕೆಂದರೆ ಫೋಟೋ ತೆಗೆದ ತಕ್ಷಣಕ್ಕೆ ಅವರ್ಯಾರು ಫೋಟೋಗ್ರಾಫರ್ ಆಗುವುದಿಲ್ಲ. ಉತ್ತಮ ಫೋಟೋಗ್ರಾಫರ್ ಆಗಬೇಕಾದರೆ ಫೋಟೋ ತೆಗೆಯುವುದರಲ್ಲಿಯೂ ಕೌಶಲ್ಯತೆ, ನೈಪುಣ್ಯತೆ ಬೇಕಾಗುತ್ತದೆ. ಹಾಗಾಗಿ ಸಾವಿರಾರು ಜನ ಫೋಟೋಗ್ರಾಫರ್ ನಮ್ಮೊಡನೆ ಇದ್ದರೂ ಕೆಲವೇ ಕೆಲವರು ಮಾತ್ರ ಖ್ಯಾತಿಪಡೆಯುತ್ತಾರೆ.
ಫೋಟೋಗ್ರಫಿ ಕೆಲವರಿಗೆ ಹವ್ಯಾಸವಾದರೆ ಮತ್ತೆ ಕೆಲವರಿಗೆ ವೃತ್ತಿಯಾಗಿದೆ. ಹೀಗಾಗಿ ಇಬ್ಬರೂ ಪ್ರತ್ಯೇಕವಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಾರೆ. ಮದುವೆ ಇನ್ನಿತರೆ ಶುಭ ಸಮಾರಂಭದಲ್ಲಿ ಪಾಲ್ಗೊಂಡು ಫೋಟೋ ತೆಗೆಯುವ ಫೋಟೋಗ್ರಾಫರ್ ಗೂ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಫೋಟೋಗ್ರಾಫರ್ ಗೂ ಅಜಗಜಾಂತರ ವ್ಯತ್ಯಾಸಗಳಿರುತ್ತವೆ. ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಫೋಟೋಗ್ರಾಫರ್ ಸದಾ ಕ್ರಿಯಾಶೀಲನಾಗಿರಬೇಕು, ಅಷ್ಟೇ ಅಲ್ಲ ಎಲ್ಲವನ್ನೂ ಸೂಕ್ಷ್ಮವಾಗಿ ಗ್ರಹಿಸುವ, ಮತ್ತು ಸಮಯದೊಂದಿಗೆ ಓಡುವ ಗುಣವನ್ನು ಹಾಗೂ ಧೈರ್ಯವನ್ನು ಹೊಂದಿರಬೇಕಾಗಿರುತ್ತದೆ.ಸಾಮಾನ್ಯವಾಗಿ ನಮ್ಮ ಕಣ್ಣಿಗೆ ಹತ್ತಾರು ಅಪರೂಪದ ದೃಶ್ಯಗಳು ಕಾಣಸಿಗುತ್ತವೆ. ಆದರೆ ಅದು ನಮಗೆ ವಿಶೇಷ ಎನಿಸುವುದಿಲ್ಲ. ಆದರೆ ಅದೇ ದೃಶ್ಯವನ್ನು ತನ್ನ ಕ್ಯಾಮರಾದಲ್ಲಿ ಸೆರೆ ಹಿಡಿದು ಅದಕ್ಕೊಂದು ಜೀವ ತುಂಬುವಲ್ಲಿ ಫೋಟೋಗ್ರಾಫರ್ ಸಫಲನಾಗಿಬಿಡುತ್ತಾನೆ. ಕೆಲವೊಮ್ಮೆ ಅಪರೂಪದ ಚಿತ್ರಗಳಿಗಾಗಿ ಫೋಟೋಗ್ರಾಫರ್ ದಿನ, ವಾರ, ತಿಂಗಳಾನುಗಟ್ಟಲೆ ಕಾಯಬೇಕಾಗುತ್ತದೆ. ಉದಾಹರಣೆಗೆ ದಟ್ಟ ಕಾಡಿನಲ್ಲಿ ವಾಸಿಸುವ ಅಪರೂಪದ ಪಕ್ಷಿಯನ್ನು ಕಂಡ ಫೋಟೋಗ್ರಾಫರ್ ಆ ಪಕ್ಷಿ ಗೂಡುಕಟ್ಟುವ, ಮೊಟ್ಟೆಯಿಡುವ, ಮರಿಮಾಡಿ ಮರಿಗಳಿಗೆ ಗುಟುಕು ನೀಡುವ ಸುಂದರ ದೃಶ್ಯಗಳನ್ನು ತನ್ನ ಕ್ಯಾಮರಾದಲ್ಲಿ ಸೆರೆಹಿಡಿದು ಫೋಟೋಗಳನ್ನು ನಮ್ಮ ಮುಂದಿಟ್ಟರೆ ಅದನ್ನು ನೋಡಿ ನಾವು ವಾವ್ ಎಷ್ಟೊಂದು ಸುಂದರವಾಗಿದೆ ಎಂದು ಉದ್ಘರಿಸುತ್ತೇವೆ.
ಆದರೆ ಅಂತಹ ಅಪರೂಪದ ಚಿತ್ರಗಳನ್ನು ತೆಗೆಯಬೇಕಾದರೆ ಆತ ಎಷ್ಟೊಂದು ಶ್ರಮಪಟ್ಟಿದ್ದಾನೆ ಎಂಬುವುದು ನಮಗೆ ತಿಳಿಯುವುದೇ ಇಲ್ಲ. ಇದಲ್ಲದೆ ನೆರೆ ಹಾವಳಿ, ಯುದ್ದ, ಭೂಕಂಪ ಇನ್ನಿತರ ದುರಂತಗಳು ಸಂಭವಿಸಿದಾಗ ಅಂತಹ ದೃಶ್ಯಗಳನ್ನು ಸೆರೆಹಿಡಿಯುವುದು ಕೂಡ ಎಲ್ಲರಿಂದಲೂ ಸಾಧ್ಯವಾಗದ ಮಾತು. ಇದಕ್ಕೆ ಧೈರ್ಯ ಜೊತೆಗೆ ಸಮಯಪ್ರಜ್ಞೆಯೂ ಅಗತ್ಯ. ಛಾಯಾಗ್ರಹಣ ಕ್ಷೇತ್ರದ ಪಿತಾಮಹ: ಇವತ್ತು ಛಾಯಾಗ್ರಹಣ ಕ್ಷೇತ್ರ ಎಲ್ಲಾ ವಿಧದ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಯಾಗಿದೆ. ಆದರೆ ಇಷ್ಟೊಂದು ಅಭಿವೃದ್ಧಿ ಒಮ್ಮೆಲೇ ಆಗಿಲ್ಲ ಬದಲಿಗೆ ಹಂತಹಂತವಾಗಿ ಅಭಿವೃದ್ಧಿಯಾಗಿರುವುದನ್ನು ನಾವು ಒಪ್ಪಲೇ ಬೇಕಾಗುತ್ತದೆ. ಛಾಯಾಗ್ರಹಣ ಕ್ಷೇತ್ರದ ಅಭಿವೃದ್ಧಿಯಾಗಲು ಹಲವರು ತಮ್ಮದೇ ಆದ ತಂತ್ರಜ್ಞಾನವನ್ನು ಬಳಸಿ ಹೊಸ ಪ್ರಯೋಗಗಳನ್ನು ಕೂಡ ಮಾಡಿದ್ದಾರೆ. ಅಂತಹವರ ಸಾಲಿಗೆ ಫ್ರಾನ್ಸ್ ದೇಶದ ಎಲ್.ಜೆ.ಎಂ.ಡಾಗೈರ್ ಸೇರುತ್ತಾರೆ. ಅವರನ್ನು ಛಾಯಾಗ್ರಹಣದ ಪಿತಾಮಹ ಎಂದು ಕೂಡ ಕರೆಯಲಾಗುತ್ತದೆ. ವಿಶ್ವ ಛಾಯಾಗ್ರಾಹಕರ ದಿನದಂದು ಪ್ರತಿಯೊಬ್ಬರು ಡಾಗೈರ್ ಅನ್ನು ನೆನಪಿಸಿಕೊಳ್ಳಲೇ ಬೇಕು. ಏಕೆಂದರೆ ಅವರು ಛಾಯಾಗ್ರಹಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ.
ಫ್ರಾನ್ಸ್ ನ ಕುಗ್ರಾಮವಾದ ಕಾರ್ಮೆಲ್ಲೀಸ್ ಎಂಬಲ್ಲಿ 18ನೇ ನವೆಂಬರ್ 1787ರಲ್ಲಿ ಡಾಗೈರ್ ಜನಿಸಿದರು. ವಿದ್ಯಾಭ್ಯಾಸದ ಬಳಿಕ ಹೊಟ್ಟೆಪಾಡಿಗಾಗಿ ಬೇರ ಬೇರೆ ವೃತ್ತಿಗಳನ್ನು ಮಾಡಿದರಾದರೂ ಕೊನೆಗೆ 1829ರಲ್ಲಿ ಛಾಯಾಗ್ರಹಣದ ಕಂಪೆನಿಯೊಂದರಲ್ಲಿ ಕೆಲಸಕ್ಕೆ ಸೇರಿದರು. ಅಲ್ಲಿ ಶ್ರಮವಹಿಸಿ ದುಡಿದ ಅವರು ಛಾಯಾಗ್ರಹಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಆಸಕ್ತಿಯಿಂದ ತಿಳಿದುಕೊಂಡರು. ಅಷ್ಟೇ ಅಲ್ಲ ಕೇವಲ ನಾಲ್ಕು ವರ್ಷದ ಅವಧಿಯಲ್ಲಿ ಅಂದರೆ 1833ರ ವೇಳೆಗೆ ಇಡೀ ಕಂಪೆನಿಯ ಚುಕ್ಕಾಣಿಯನ್ನು ತಮ್ಮ ಕೈಗೆ ಪಡೆದುಕೊಂಡರು. ಆ ನಂತರ ಹೆಚ್ಚಿನ ಶ್ರಮವಹಿಸಿ ದುಡಿದ ಅವರು ಕೆಲವೇ ವರ್ಷಗಳಲ್ಲಿ ಎಲ್ಲೆಡೆ ಡಾಗೈರ್ ಕಂಪೆನಿ ಎಂದೇ ಕರೆಸಿಕೊಳ್ಳುವಷ್ಟರ ಮಟ್ಟಿಗೆ ಬೆಳೆದು ನಿಂತರು.
ಛಾಯಾಗ್ರಹಣದಲ್ಲಿ ಪ್ರಯೋಗ: ಛಾಯಾಗ್ರಹಣ ಕ್ಷೇತ್ರದಲ್ಲಿ ಏನಾದರೊಂದು ಸಾಧನೆ ಮಾಡಬೇಕೆಂಬ ತುಡಿತದಲ್ಲಿದ್ದ ಅವರು ಬೆಳ್ಳಿ ಲೇಪನದ ಫಲಕಗಳನ್ನು ಬಳಸಿ ಅವುಗಳ ಮೇಲೆ ಅಯೋಡೈಡ್ ಅನ್ನು ಲೇಪಿಸಿ ನಂತರ ಅದನ್ನು ಅಯೋಡಿನ್ ಹಬೆಯೊಂದಿಗೆ ವರ್ತಿಸುವಂತೆ ಮಾಡಿ ಚಿತ್ರಗ್ರಹಣದ ಕಾಲವನ್ನು ಎಂಟು ಗಂಟೆಯಿಂದ ಮೂವತ್ತು ನಿಮಿಷಕ್ಕೆ ಸೀಮಿತಗೊಳಿಸಿ ಒಮ್ಮೆಲೆ ಪಾಸಿಟಿವ್ (ಧನ) ಪ್ರಿಂಟನ್ನು ಪಡೆಯುವ ತಂತ್ರವನ್ನು ಕಂಡು ಹಿಡಿದರು. 1837ರ ಸುಮಾರಿಗೆ ಲವಣಜಲದಲ್ಲಿ ಈ ಚಿತ್ರವನ್ನು ಮುಳುಗಿಸಿ ಅದರ ಶಾಶ್ವತ ಚಿತ್ರವನ್ನು ಪಡೆದು ಸಫಲರಾದರು. ಈ ವಿಧಾನದಿಂದ ಒಮ್ಮೆಲೆ ಒಂದೇ ಪಾಸಿಟಿವ್ ಚಿತ್ರವನ್ನು ಪಡೆಯಲು ಸಾಧ್ಯವೇ ವಿನಃ ಅದಕ್ಕಿಂತ ಹೆಚ್ಚಿನ ಚಿತ್ರಗಳನ್ನು ಪಡೆಯಲು ಸಾಧ್ಯವಿಲ್ಲ ಎಂಬುವುದನ್ನು ಮನದಟ್ಟು ಮಾಡಿಕೊಂಡರು.
ಡಾಗೈರ್ ರವರು ಬರೆದ ಕಿರುಪುಸ್ತಕ ಡಾಗೈರ್ವಿಧಾನವೆಂದು ವಿಶ್ವದ ಹನ್ನೆರಡು ಭಾಷೆಯಲ್ಲಿ ಪ್ರಕಟವಾಗಿರುವುದು ಅವರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ. ಅಲ್ಲದೆ ಈ ವಿಧಾನ ವಿಶ್ವದ ಎಲ್ಲಾ ಸ್ಟುಡಿಯೋಗಳಲ್ಲಿ ಆರಂಭವಾಗಲು ಕೂಡ ಕಾರಣವಾಯಿತು. ಹೀಗೆ ಛಾಯಾಗ್ರಹಣ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ಡಾಗೈರ್ 10ನೇ ಜುಲೈ 1851ರಲ್ಲಿ ತಮ್ಮ 66ನೇ ವಯಸ್ಸಿಗೆ ನಿಧನರಾದರು. ಅಂತಹ ಸಾಧಕನ ನೆನಪಿಗಾಗಿ ಪ್ರತಿವರ್ಷ ಆಗಸ್ಟ್ 19ನ್ನು ವಿಶ್ವ ಛಾಯಾಗ್ರಾಹಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ.
ಇಂದು ಛಾಯಾಗ್ರಹಣ ಕ್ಷೇತ್ರ ವ್ಯಾಪ್ತಿಗೂ ಮೀರಿ ಬೆಳೆದಿದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನೊಳಗೊಂಡ ವಿವಿಧ ನಮೂನೆಯ ಕ್ಯಾಮರಾಗಳು ಬರುವ ಮೂಲಕ ಛಾಯಾಗ್ರಹಣ ಕ್ಷೇತ್ರದಲ್ಲಿ ಕ್ರಾಂತಿಗಳಾಗಿವೆ. ಆದರೂ ಇಷ್ಟೆಲ್ಲಾ ಅಭಿವೃದ್ಧಿಯ ಹಿಂದೆ ಡಾಗೈರ್ ರಂತಹ ಸಾಧಕರ ಶ್ರಮವಿರುವುದನ್ನು ನಾವು ಮರೆಯುವಂತಿಲ್ಲ. ಹಾಗಾಗಿ ಛಾಯಾಗ್ರಹಣ ಕ್ಷೇತ್ರಕ್ಕೆ ಭದ್ರವಾದ ಬುನಾದಿ ಹಾಕಿಕೊಟ್ಟಂತಹ ಡಾಗೈರ್ ಅನ್ನು ವಿಶ್ವ ಛಾಯಾಗ್ರಾಹಕರ ದಿನಾಚರಣೆ ಸಂದರ್ಭ ನೆನಪಿಸಿಕೊಳ್ಳಲೇ ಬೇಕಾಗುತ್ತದೆ.
ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಒಂದುವರೆ ತಿಂಗಳಲ್ಲಿ ಸೌದಿಯಿಂದ 56,700 ಮಂದಿ ಭಾರತೀಯರ ಗಡಿಪಾರು
ಹೊಸದಿಲ್ಲಿ: ಸುಮಾರು 56,700 ಮಂದಿ ಭಾರತೀಯರನ್ನು ಸೌದಿ ಅರೇಬಿಯಾ ಮುಂದಿನ ಒಂದುವರೆ ತಿಂಗಳಲ್ಲಿ ಗಡಿಪಾರು ಮಾಡಲಿದೆ ಮತ್ತು ಇವರೆಲ್ಲರಿಗೆ ಎಮರ್ಜೆನ್ಸಿ ಸರ್ಟಿಫಿಕೇಟ್ ನೀಡಲು ಹತ್ತು ಅಧಿಕಾರಿಗಳನ್ನು ಸೌದಿಗೆ...
ಜನಸಂಖ್ಯೆಯಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ
ಬೆಂಗಳೂರು: ದೇಶದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ್ಕೆ 9ನೇ ಸ್ಥಾನದಲ್ಲಿದೆ. ಇದು 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6,10,95,297 ಜನರಿದ್ದು, 2001ರ ಜನಗಣತಿಗೆ ಹೋಲಿಸಿದರೆ...
ಬೆಂಗಳೂರಿನ ಐಐಎಂ-ಬಿಗೆ ಹುಸಿ ಬಾಂಬ್ ಕರೆ
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಬೆಂಗಳೂರು(ಐಐಎಂ-ಬಿ) ಗೆ ಬಾಂಬ್ ಕರೆ ಬಂದಿದ್ದು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಶೋಧಿಸಿದಾಗ ಇದು ಹುಸಿ ಕರೆಯೆಂದು ತಿಳಿದುಬಂದಿದೆ.
ಎಪಿಎಲ್ -ಬಿಪಿಎಲ್ ಕಾರ್ಡ್ ದಾರರೇ ಅಕ್ಕಿ ಸಿಗೋದು ಫುಲ್ ಡೌಟು!
ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರೇ ಹುಷಾರ್..! ಮುಂದಿನ ತಿಂಗಳು ನಿಮಗೆ ಅಕ್ಕಿ ಸಿಗುವುದು ಬಹುತೇಕ ಅನುಮಾನ ಕಾರಣ ರಾಜ್ಯದ ಗೋದಾಮಿನಲ್ಲಿ ಇರುವ ಅಕ್ಕಿಗೆ ನುಸಿಬಾಧೆ ತಗುಲಿದ್ದು..
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಬಂಗಾಳಿ ದ್ವಿತೀಯ ಭಾಷೆ
ಬೆಂಗಳೂರು: ಕರ್ನಾಟಕದಲ್ಲಿ ಬಂಗಾಳಿ ಭಾಷೆಯನ್ನು ಈ ಶೈಕ್ಷಣಿಕ ವರ್ಷದಿಂದ ದ್ವಿತೀಯ ಭಾಷೆಯನ್ನಾಗಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಸಮುದಾಯದವರು ದೀರ್ಘ ಸಮಯದಿಂದ ಈ ಬಗ್ಗೆ ಮನವಿ...
ಅನಂತಮೂರ್ತಿ ಹಿಂದಿಕ್ಕಿ ಬೂಕರ್ ಪಡೆದ ಅಮೆರಿಕಾದ ಲೇಖಕಿ
ಲಂಡನ್: ಕರ್ನಾಟಕದ ಸಾಹಿತಿ ಯು. ಆರ್. ಅನಂತಮೂರ್ತಿ ಅವರು 2013ರ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯಿಂದ ಕೂದಲೆಳೆಯ ಅಂತರದಲ್ಲಿ ವಂಚಿತರಾಗಿದ್ದಾರೆ. ಅನಂತಮೂರ್ತಿ ಅವರನ್ನು ಹಿಂದಿಕ್ಕಿದ ಅಮೆರಿಕಾದ ಲೇಖಕಿ ಲೈಡಿಯಾ
ಬಿಸಿಸಿಐ ಅಧ್ಯಕ್ಷನ ಅಳಿಯನೂ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ?
ಮುಂಬಯಿ: ಸ್ಪಾಟ್ ಫಿಕ್ಸಿಂಗ್ ನ ನೀರು ಬಿಸಿಸಿಐ ಕಾಲಬುಡಕ್ಕೆ ಬಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೆಯಪ್ಪನ್ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ನಾನು ಮುಗ್ದ, ಯಾವುದೇ ತಪ್ಪು ಮಾಡಿಲ್ಲ: ಶ್ರೀಶಾಂತ್
ಹೊಸದಿಲ್ಲಿ: ನಾನು ಮುಗ್ದ ಮತ್ತು ಯಾವುದೇ ತಪ್ಪನ್ನು ಮಾಡಿಲ್ಲ. ನಾನು ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿಲ್ಲ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡ...
ಫನೀಶ್ ಮೂರ್ತಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಕೋರ್ಟ್ ಹೊರಗಡೆ ಇತ್ಯರ್ಥ
ಹೊಸದಿಲ್ಲಿ: ಸಹ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಎದುರಿಸುತ್ತಿರುವ ಐಗೇಟ್ ನ ಮಾಜಿ ಸಿಇಒ ಫನೀಶ್ ಮೂರ್ತಿ ತನ್ನ ಮೇಲಿನ ಪ್ರಕರಣವನ್ನು ಕೋರ್ಟ್ ನ ಹೊರಗಡೆಯೇ ಬಗೆಹರಿಸುವ
ಸಂಜಯ್ ದತ್ ಪುಣೆಯ ಯೆರವಾಡ ಜೈಲಿಗೆ
ಮುಂಬಯಿ: 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ನ್ನು ಪುಣೆಯ ಯೆರವಾಡ ಜೈಲಿಗೆ ಸ್ಥಳಾಂತರಿಸಲಾಗಿದೆ. ಮೇ 16ರಂದು ದತ್ ವಿಶೇಷ ಟಾಡಾ ಕೋರ್ಟ್ ಮುಂದೆ ಶರಣಾಗಿದ್ದರು.
ಚೆನ್ನೈ ಪೊಲೀಸರ ದಾಳಿ: 6 ಮಂದಿ ಬುಕ್ಕಿಗಳ ಸೆರೆ
ಚೆನ್ನೈ: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ನ ಮೂರು ಮಂದಿ ಆಟಗಾರರು ಸಿಕ್ಕಿಬಿದ್ದ ಮರುದಿನ ಚೆನ್ನೈ ಪೊಲೀಸರು 10 ಕಡೆಗಳಲ್ಲಿ ದಾಳಿ ಮಾಡಿ 6 ಮಂದಿ ಬುಕ್ಕಿಗಳನ್ನು ಬಂಧಿಸಿದ್ದಾರೆ.
ದೆಹಲಿಯಲ್ಲಿ ವೈದ್ಯನಿಂದ ರೋಗಿಯ ಅತ್ಯಾಚಾರ
ಹೊಸದಿಲ್ಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಯ 51ರ ಹರೆಯದ ವೈದ್ಯ ತನ್ನ ಕ್ಲಿನಿಕ್ ನಲ್ಲಿ 21ರ ಹರೆಯದ ರೋಗಿಯೊಬ್ಬಳನ್ನು ಅತ್ಯಾಚಾರ ಮಾಡಿದ ಪ್ರಕರಣ ನಡೆದಿದೆ. ದೆಹಲಿಯ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಯಲ್ಲಿ
ದೆಹಲಿಯಲ್ಲಿ 12ನೇ ತರಗತಿ ಬಾಲಕಿಯ ಗುಂಡಿಕ್ಕಿ ಹತ್ಯೆ
ಹೊಸದಿಲ್ಲಿ: ದಕ್ಷಿಣ ದೆಹಲಿಯಲ್ಲಿ 12ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹುಡುಗನೊಬ್ಬ ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಮುನಿಕ್ರಾ ಪ್ರದೇಶದ ಬುಧ ವಿಹಾರ್ ಪ್ರದೇಶದಲ್ಲಿರುವ
ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮುಂಬಯಿ: ಮಹಾರಾಷ್ಟ್ರದ ಬಿಜೆಪಿಯ ಎಂಎಲ್ ಸಿ ಮಧು ಚೌವಾಣ್ ತನ್ನ ಪಕ್ಷದ ಮಾಜಿ ಕಾರ್ಯಕರ್ತೆಯನ್ನು ಅತ್ಯಾಚಾರ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ.
ಮಧು ಚೌವಾಣ್ ವಿರುದ್ಧ ಮುಂಬಯಿ ಪೊಲೀಸರು
ಹಲ್ಲೆಗೊಳಗಾಗಿದ್ದ ಪಾಕ್ ಕೈದಿ ಸಾವು
ಚಂಡೀಗಡ: ಜಮ್ಮು ಜೈಲಿನಲ್ಲಿ ಕಳೆದ ವಾರ ಸಹ ಕೈದಿಗಳಿಂದ ಹಲ್ಲೆಗೊಳಗಾಗಿದ್ದ ಪಾಕಿಸ್ತಾನದ ಕೈದಿ ಸಾನುಲ್ಲಾ ರಂಜಾಯ್ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಹತ್ಯೆ ಪ್ರಕರಣ: ತಲ್ವಾರ್ ದಂಪತಿ ಹೇಳಿಕೆ ದಾಖಲಿಸಲು ಕೋರ್ಟ್ ಆದೇಶ
ಘಜಿಯಾಬಾದ್: ಆರುಷಿ-ಹೇಮರಾಜ್ ಹತ್ಯಾ ಪ್ರಕರಣದಲ್ಲಿ ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯವು ರಾಜೇಶ್ ಮತ್ತು ನುಪುರ್ ತಲ್ವಾರ್ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.
ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ದೇಹದ ಮೇಲಿತ್ತು ಕಚ್ಚಿದ ಗುರುತು!
ಹೊಸದಿಲ್ಲಿ: ಕಳೆದ ವರ್ಷ ಡಿಸೆಂಬರ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಇಬ್ಬರು ಕಚ್ಚಿದ ಗುರುತುಗಳಿದ್ದವು ಎಂದು ಹೇಳಲಾಗಿದೆ. ಈ ಎರಡು ಗುರುತುಗಳು
ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ, ಕಚೇರಿಗೆ ಐಟಿ ದಾಳಿ
ಮುಂಬಯಿ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ ಹಾಗೂ ಕಚೇರಿಗೆ ದಾಳಿ ಮಾಡಿದ್ದಾರೆ. ಕಿರುತೆರೆಯಲ್ಲಿ ತನ್ನ ಧಾರಾವಾಹಿಗಳಿಂದ ಹೆಚ್ಚಿನ ಪ್ರಚಾರವನ್ನು ಪಡೆದುಕೊಂಡಿರುವ

Write Your Comment Here...