ಟಾಲಿವುಡ್ ನಲ್ಲಿ ಜುಲಾಯಿ ಹವಾ
[Updated 06/08/2012 12:18 pm]ಟಾಲಿವುಡ್ ಯಾವಾಗಲೂ ಒಂದಲ್ಲ ಒಂದು ವಿಷಯದಲ್ಲಿ ಸುದ್ದಿ ಮಾಡುತ್ತಲೇ ಇರುತ್ತದೆ. ಇದೀಗ ಎಲ್ಲೆಡೆ ವಿಪರೀತ ಕುತೂಹಲಕ್ಕೆ ಕಾರಣವಾಗಿರುವುದು ಅಲ್ಲು ಅರ್ಜುನ್ ಅಭಿನಯದ ಜುಲಾಯಿ ಚಿತ್ರ. ಚಿತ್ರ ಈ ತಿಂಗಳಲ್ಲಿ ತೆರೆ ಕಾಣಲಿದ್ದು ತ್ರಿವಿಕ್ರಮ್ ನಿರ್ದೇಶನದ ಈ ಚಿತ್ರದಲ್ಲಿ ಇಲಿಯಾನಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನೆಮಾದಲ್ಲಿ ಹಿಂದೆಂದೂ ಕಾಣಿಸಿಕೊಳ್ಳದಷ್ಟು ಅದ್ಭುತವಾಗಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ ಅನ್ನೋ ವಿಷಯ ಟಾಲಿವುಡ್ ಮೂಲದಿಂದ ಈಗಾಗ್ಲೇ ಕೇಳಿ ಬಂದಿರೋದರಿಂದ ಅಭಿಮಾನಿಗಳು ಚಿತ್ರ
ದ ಬಿಡುಗಡೆಗಾಗಿ ಕಾತರರಾಗಿದ್ದಾರೆ.
ಅಲ್ಲು ಅರ್ಜುನ್ ಚಿತ್ರ ಅಂದ ಮೇಲೆ ಅಲ್ಲಿ ಸೂಪರ್ ಡ್ಯಾನ್ಸ್ ಅಂತೂ ಇದ್ದೇ ಇರುತ್ತದೆ ಅಂತ ಅಭಿಮಾನಿಗಳಿಗೆ ಗೊತ್ತೇ ಇದೆ. ಜುಲಾಯಿಯಲ್ಲಂತೂ ಅಲ್ಲು ಸ್ಟೆಪ್ಸ್ ಸಿಕ್ಕಾಪಟ್ಟೆ ಸೂಪರ್ ಅಂತ ಸುದ್ದಿ. ಚಿತ್ರದಲ್ಲಿ ಆರು ಹಾಡುಗಳಿದ್ದು, ಪಕ್ಕಾ ವೆಸ್ಟರ್ನ್ ಶೈಲಿಯಲ್ಲಿ ಹಾಡುಗಳ ಚಿತ್ರೀಕರಣ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಮಾತ್ರವಲ್ಲ ಹಾಡುಗಳು ಕೂಡಾ ಒಂದಕ್ಕಿಂತ ಒಂದು ಆಕರ್ಷಕವಾಗಿದೆಯಂತೆ. ಚಿತ್ರದಲ್ಲಿ ಅಲ್ಲು ಅರ್ಜುನ್ ರವಿ ಮತ್ತು ಇಲಿಯಾನಾ ಮಧು ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನವಿರಾದ ಪ್ರೇಮ ಕತೆ ಮತ್ತು ಆ್ಯಕ್ಷನ್ ಹೊಂದಿರುವ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತರರಾಗಿದ್ದಾರೆ. ಚಿತ್ರ ಮಲಯಾಳಂಗೆ ಕೂಡಾ ಡಬ್ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿದೆ.
ಹೇ ಬುಲ್ ಬುಲ್ ಮಾತಾಡಕಿಲ್ವ ?
ಬುಲ್ ಬುಲ್ ಹಲವಾರು ಕಾರಣಗಳಿಂದ ಬಹು ನಿರೀಕ್ಷೆಯ ಚಿತ್ರ. ಆ ನಿರೀಕ್ಷೆಯನ್ನು ಚಿತ್ರ ಸುಳ್ಳು ಮಾಡುವುದಿಲ್ಲ. ಸಾಕಷ್ಟು ಮಾಸ್ ಮತ್ತು ಸೆಂಟಿಮೆಂಟ್ ಎಲಿಮೆಂಟ್ಸ್ ಗಳನ್ನು ಚಿತ್ರ ಹೊಂದಿದೆ. ತೆಲುಗಿನ ಡಾರ್ಲಿಂಗ್ ಚಿತ್ರದ ರಿಮೇಕ್ ಆದ...
ಹಾಸ್ಯ - ಲಾಸ್ಯ - ತಾಜಾ ತನದ ಪರಾರಿ
ಆ ದಿನಗಳು, ಸೂರ್ಯ ಕಾಂತಿಯ ನಂತರ ಮರೆಯಾಗಿದ್ದ ಕೆ. ಎಂ . ಚೈತನ್ಯ, ನಿರ್ದೇಶಕರು ಮತ್ತೆ ಒಳ್ಳೆಯ ಚಿತ್ರ ಕತೆಯೊಂದಿಗೆ ಪರಾರಿ ಮೂಲಕ ವಾಪಸ್ಸಾಗಿದ್ದಾರೆ. ಯುವಕರ ವಿಷಯವನ್ನು ಕೇಂದ್ರ ವಾಗಿಟ್ಟುಕೊಂಡು ನಿರ್ದೇಶನ ಮಾಡಿರುವ ಇವರು...
ತಿರುವುಗಳ ತಿರುವಿನಲ್ಲಿ......ಸುದೀಪ್ ನ ಬಚ್ಚನ್
ಚಿತ್ರ ರಸಿಕರ ಬಹು ನಿರೀಕ್ಷೆಯ ಚಿತ್ರ ಬಚ್ಚನ್ - ಈ ವಾರ ರಾಜ್ಯಾದ್ಯಂತ ತೆರೆ ಕಂಡಿದೆ . ಚಿತ್ರ ಪ್ರೇಕ್ಷಕರ ಮನ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ . ಸುದೀಪ್ ಅಭಿಮಾನಿಗಳಿಗಂತೂ ಯುಗಾದಿಯ ಕೊಡುಗೆ ಈ ಚಿತ್ರ...
ಓ ಲೈಲಾ.. ಹಾಡಿಗೆ ಹೆಜ್ಜೆ ಕಾಮಕನ್ಯೆ..!
ಕಾಮಕನ್ಯೆ ಸನ್ನಿ ಲಿಯೋನ್ ಅಂತರ್ಜಾಲದಲ್ಲಿ ಅತಿ ಅಪಾಯಕಾರಿ ಸೆಲೆಬ್ರೆಟಿ ಎಂಬ ಪಟ್ಟಕ್ಕೇರಿ ತುಂಬಾ ದಿನಗಳು ಕಳೆದಿದೆ. ಅರಸಿಕ ಕೂಡ ಆಕೆಯ ಕಂಡೊಡನೆ ರಸಿಕನಾಗಿಬಿಡಬಲ್ಲ, ಇಂಥ ಸನ್ನಿಲಿಯೋನ್ ನಿಜಕ್ಕೂ...
ಪವರ್ ಸ್ಟಾರ್ ಸುದೀಪ್ v/s ಕಿಚ್ಚ ಪುನೀತ್
ಕನ್ನಡದ ಕಿರುತೆರೆಯಲ್ಲಿ ಈಗ ಸ್ಟಾರ್ ವಾರ್ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿರುವ ಈ ಹೊತ್ತಿನಲ್ಲೇ ಸ್ಯಾಂಡಲ್ ವುಡ್ ನ ಸ್ಟಾರ್ ಗಳ ವಾಕ್ ಸಮರಕ್ಕೆ ಕಿರುತೆರೆ ವೇದಿಕೆ ಒದಗಿಸಿದೆ.
ಬಿಜೆಪಿಗೆ ಬಡಿಯಲಿದೆ ಸುಂಟರಗಾಳಿ?
ಮುಂಗಾರು ಮಳೆ ಹುಡುಗಿ ಪೂಜಾಗಾಂಧಿ ಬಿಎಸ್ ಆರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದರ ಬಗ್ಗೆ ಬಿಎಸ್ ಆರ್ ಕಾಂಗ್ರೆಸ್ ನಾಯಕಿ ಹಾಗೂ ಸುಂಟರಗಾಳಿ ರಕ್ಷಿತಾ ಅವರಿಗೆ ತೀವ್ರ ಅಸಮಾಧಾನ ಉಂಟಾಗಿದ್ದು, ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ.
ದ್ವಿತಿಯಾರ್ಧದ ಶೂಟಿಂಗಿನಲ್ಲಿ ನಾಮ್ ಹೈ ಬೊಸ್
ಬಾಲಿವುಡ್ ಖಿಲಾಡಿ ಅಕ್ಷಯ್ ಕುಮಾರ್ ಜೊತೆ ಬ್ಲೂ ಚಿತ್ರವನ್ನು ನಿರ್ದೇಶಿಸಿ, ಅದ್ದೂರಿ ಪ್ರಚಾರದ ನಡುವೆಯೂ ಹೇಳಿಕೊಳ್ಳುವ ಯಶಸ್ಸು ಪಡೆಯದ ನಿರ್ದೇಶಕ ಆಂಟನಿ ಡಿಸೋಜ ಮತ್ತೊಮ್ಮೆ ಖಿಲಾಡಿಯನ್ನು ಮುಂದಿಟ್ಟುಕೊಂಡು ನಾಮ್ ಹೈ ಬೊಸ್ ಎಂದು ಹೇಳಹೊರಟಿದ್ದಾರೆ.
ಬಿಪಾಶಾಳ ಸೊಂಟ ಮುರಿದ ಪೂನಂ ಪಾಂಡೆ
ಪೂನಂ ಪಾಂಡೇ ಬಾಲಿವುಡ್ ನಲ್ಲಿ ಎಷ್ಟೊಂದು ನಶೆ ಏರಿಸಿ ಬಿಟ್ಟಿದ್ದಾಳೆಂದರೆ ನಶಾ ಚಿತ್ರದ ನಿರ್ದೇಶಕ ಅಮಿತ್ ಸಕ್ಸೇನಾ ಅವಳ ಫುಲ್ ಫಿದಾ ಆಗಿಬಿಟ್ಟಿದ್ದಾನೆ. 2003ರಲ್ಲಿ ಜಿಸ್ಮ್ ಚಿತ್ರವನ್ನು ನಿರ್ದೇಶಿಸಿ ಬಿಪಾಶಾ ಬಸುವನ್ನು...
ಸಿಕ್ಸ್ ಪ್ಯಾಕ್ ಉತ್ಪನ್ನವಾಗಲಿರುವ ಕಪೂರ್
ಬಾಲಿವುಡ್ ನಟ ಅನಿಲ್ ಕಪೂರ್, ಸಿಕ್ಸ್ ಪ್ಯಾಕ್ ಅಂಗಸೌಷ್ಠವ ಹೊಂದುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆಹಾರ ಸೇವನೆಯನ್ನು ಮಿತಗೊಳಿಸಿ ಕಟ್ಟುಮಸ್ತಾದ ದೇಹವನ್ನು ಹೊಂದುವುದು ಅವರ ಸದ್ಯದ ಇರಾದೆ...
ಆಸ್ಕರ್ ರೇಸ್ ನಿಂದ ಬರ್ಫಿ ಔಟ್
ರಣಬೀರ್ ಕಪೂರ್, ಪ್ರಿಯಾಂಕಾ ಚೋಪ್ರಾರ ಬರ್ಫಿ ಆಸ್ಕರ್ ಪ್ರಶಸ್ತಿಗೆ ಈ ಬಾರಿಯ ಭಾರತದ ಅಧಿಕೃತ ಚಿತ್ರವಾಗಿತ್ತು. ವಿವಿಧ ಸಿನೆಮಾಗಳ ದೃಶ್ಯಗಳ ಮರು ಸೃಷ್ಟಿಯಂತಿದ್ದ ಆ ಚಿತ್ರವನ್ನು ಆಸ್ಕರ್ ಗೆ ಅಧಿಕೃತ ನಾಮಕರಣ
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಐಪಿಎಲ್ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ನಕಾರ
ಹೊಸದಿಲ್ಲಿ: ಸ್ಪಾಟ್ ಫಿಕ್ಸಿಂಗ್ ನಿಂದಾಗಿ ಐಪಿಎಲ್ ನ ಮುಂದಿನ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಕೆಲವು ಆಟಗಾರರು ಅಕ್ರಮದಲ್ಲಿ ತೊಡಗಿದ್ದಾರೆಂಬ ಕಾರಣಕ್ಕೆ ಐಪಿಎಲ್ ನ್ನು ಸಂಪೂರ್ಣವಾಗಿ
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.

Write Your Comment Here...