ರೈತರು ಅಲಂಕಾರಿಕ ಮೀನುಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು
[Updated 08/08/2012 05:18 pm]ಚಿಕ್ಕಬಳ್ಳಾಪುರ, ಆ.8: ಅಲಂಕಾರಿಕ ಮೀನುಗಳಿಗೆ ದೇಶ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದ್ದು ರೈತರು ಹೆಚ್ಚಿನ ಪ್ರಮಾಣದಲ್ಲಿ ಅಲಂಕಾರಿಕ ಮೀನು ಉತ್ಪಾದನೆ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ ಕಾರ್ಯ ನಿರ್ವಾಹಕ ನಿರ್ದೇಶಕಿ ಡಾ.ಮಧುಮಿತ ಮುಖರ್ಜಿ ಮಂಗಳವಾರ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಮೀನು ಅಭಿವೃದ್ಧಿ ಮಂಡಳಿ, ಮೀನುಗಾರಿಕೆ ಇಲಾಖೆ ಮತ್ತು ಕೃಷಿ ವಿಶ್ವವಿದ್ಯಾನಿಲಯದ ಒಳನಾಡು ಮೀನುಗಾರಿಕೆ ವಿಭಾಗದ ವತಿಯಿಂದ ಜಿಲ್ಲೆಯಲ್ಲಿ ಅಲಂಕಾರಿಕ ಮೀನು ಉತ್ಪಾದನಾ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಮೀನು ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಫಲಾನುಭವಿಗಳಿಗೆ ಏರ್ಪಡಿಸಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿ ಅಲಂಕಾರಿಕ ಮೀನು ಉತ್ಪಾದನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉತ್ತಮ ವಾತಾವರಣ ಇದ್ದು ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದರು.


ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ನಾಗರಾಜ್ ಮಾತನಾಡಿ ರಾಷ್ಟ್ರೀಯ ಮೀನು ಅಭಿವೃದ್ಧಿ ಮಂಡಳಿ ವತಿಯಿಂದ ಅಲಂಕಾರಿಕ ಮೀನು ಉತ್ಪಾದಿಸುವ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಹಾಯಧನ ನೀಡಲಾಗುತ್ತಿದೆ. ಪ್ರಸ್ತುತ ಈ ಯೋಜನೆ ಅಡಿಯಲ್ಲಿ ತಾಲ್ಲೂಕಿನಲ್ಲಿ 30 ಫಲಾನುಭವಿಗಳನ್ನು ಗುರ್ತಿಸಿ ಸಹಾಯ ಹಸ್ತ ನೀಡಲಾಗಿದೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಜಿಲ್ಲೆಯಾದ್ಯಂತ ಈ ಯೋಜನೆ ವಿಸ್ತರಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರೈತರಿಗೆ ಹೆಚ್ಚಿನ ಅರಿವು ಮೂಡಿಸಲು ಶೀಘ್ರದಲ್ಲೇ ದೊಡ್ಡ ಪ್ರಮಾಣದ ಮೀನು ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗುವುದು ಎಂದು ಹೇಳಿದರು.
ರಾಷ್ಟ್ರೀಯ ಮೀನು ಅಭಿವೃದ್ಧಿ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪ್ರದೀಪ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಎಸ್.ನಾಗೇಂದ್ರಬಾಬು, ಹಿರಿಯ ಸಂಶೋಧನಾ ಸಹಾಯಕ ದೇವರಾಜೇಗೌಡ, ತರಬೇತುದಾರರಾದ ರಂಜಿತ್, ವಿಶ್ವಾಸ್, ಶ್ರೀನಿವಾಸ್, ರೆಡ್ಡಿ , ವೆಂಕಟೇಶ್ ಮುಂತಾದವರು ಹಾಜರಿದ್ದರು.
ನಂಜನಗೂಡಿನಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ
ದಕ್ಷಿಣ ಕಾಶಿ ಶ್ರೀಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಧನುರ್ಮಾಸದಲ್ಲಿ ನಡೆಯುವ ಷಷ್ಠಿ ಸುಬ್ರಹ್ಮಣ್ಯೇಶ್ವರ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ನೂರಾರು ಭಕ್ತರು ಶ್ರದ್ಧಾಭಕ್ತಿಯಿಂದ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥ ಎಳೆದು ಪುನೀತರಾದರು.
ಧೂಳುಮಯ ರಸ್ತೆ: ತಿ.ನರಸೀಪುರ ಬಂದ್ಗೆ ನಿರ್ಧಾರ
ಪಟ್ಟಣದ ಪ್ರಮುಖ ರಸ್ತೆಗಳನ್ನು ಧೂಳಿನಿಂದ ಮುಕ್ತ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಲು ಆಗ್ರಹಿಸಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳ ಜಡತ್ವವನ್ನು ಬಿಡಿಸಲು ನಾಗರೀಕ ಸೇವಾ ವೇದಿಕೆ ನರಸೀಪುರ ಬಂದ್ ಹೋರಾಟಕ್ಕೆ ನಿರ್ಧರಿಸಿದೆ.
ತಿ.ನರಸೀಪುರದಲ್ಲಿ ಮರಳು ನೀತಿ ಉಲ್ಲಂಘಿಸಿ ದಂಧೆ
ಮರಳು ನೀತಿಯನ್ನು ಜಾರಿಗೆ ತಂದ ಸರ್ಕಾರದ ಅಸಡ್ಡೆ, ಅಧಿಕಾರಿಗಳಿಗೆ ಹಣದ ಮೇಲಿರುವ ಮಮತೆಯಿಂದಾಗಿ ಇಷ್ಟೊತ್ತಿಗಾಗಲೇ ನಿಯಂತ್ರಣಗೊಳ್ಳಬೇಕಿದ್ದ ಅಕ್ರಮ ಮರಳು ದಂಧೆ ಮರಳು ನೀತಿಯನ್ನೇ ನಿರಂತರವಾಗಿ ಉಲ್ಲಂಘಿಸಿ ವ್ಯಾಪಕಗೊಳ್ಳುತ್ತಿದೆ.
ನಂಜನಗೂಡಿನಲ್ಲಿ ನಿಲ್ಲದ ಬೀದಿನಾಯಿಗಳ ಹಾವಳಿ
ನಂಜನಗೂಡಿನಲ್ಲಿ ಬೀದಿನಾಯಿಗಳನ್ನು ಹಿಡಿದು ಕಾಡಿಗೆ ಬಿಟ್ಟರೂ ಅವುಗಳ ಹಾವಳಿ ಮಾತ್ರ ಕಡಿಮೆಯಾದಂತೆ ಕಂಡುಬರುತ್ತಿಲ್ಲ. ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಂಡು ಬರುತ್ತಿರುವ ಬೀದಿ ನಾಯಿಗಳ ಸಂಖ್ಯೆ ಸುಮಾರು ಒಂದು ಸಾವಿರಕ್ಕೂ ಮೀರಿದೆ...
ಚಿಕ್ಕರಸಿನಕೆರೆ ಬಸಪ್ಪನಿಗೆ ಪುಷ್ಪಾಭಿಷೇಕ
ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸಪ್ಪನಿಗೆ 10ಸಾವಿರಕ್ಕೂ ಹೆಚ್ಚು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪುಷ್ಪಾಭಿಷೇಕ ನೆರವೇರಿಸಲಾಯಿತು.
ತಮಿಳುನಾಡಿಗೆ ನೀರು: ಮದ್ದೂರಿನಲ್ಲಿ ಪ್ರತಿಭಟನೆ
ಪಟ್ಟಣದ ಟಿಬಿ ವೃತ್ತದಲ್ಲಿ ವಿಶ್ವ ಒಕ್ಕಲಿಗರ ಜನ ಜಾಗೃತಿ ವೇದಿಕೆಯ ಕಾರ್ಯಕರ್ತರು ತಮಿಳುನಾಡಿಗೆ ಕೆಆರ್ ಎಸ್ ಅಣೆಕಟ್ಟೆಯಿಂದ ನೀರು ಬಿಡುವುದನ್ನು ಖಂಡಿಸಿ ಹೆದ್ದಾರಿ ತಡೆ ನಡೆಸಿದರು.
ಭಾರತೀನಗರದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಿಧನ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ 1960ರ ಕಾಲಾವಧಿಯ ಚಲನಚಿತ್ರ ಸ್ಟಿಲ್ ಛಾಯಾಗ್ರಾಹಕರಾದ ಭಾರತೀನಗರದ ಜಿ.ಎಸ್.ಗಂಗಾಧರ್ (85) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಗೆಜ್ಜಲಗೆರೆಯಲ್ಲಿ ಮುಂದುವರೆದ ಹೆದ್ದಾರಿ ತಡೆ ಪ್ರತಿಭಟನೆ
ತಾಲ್ಲೂಕಿನ ಗೆಜ್ಜಲಗೆರೆ ಬಳಿ ರೈತ ಸಂಘದ ಕಾರ್ಯಕರ್ತರು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಹೆದ್ದಾರಿ ತಡೆ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಅಪಾಯಕ್ಕೆ ಆಹ್ವಾನ ನೀಡುವ ಸೇತುವೆ
ಸರಗೂರು ಸಮೀಪದ ಸಾಗರೆ ಗ್ರಾಮದ ಮಾರಮ್ಮ ದೇವಾಲಯದ ಹಿಂಭಾಗದ ಕಬಿನಿ ಬಲದಂಡ ನಾಲೆಯ ಸೇತುವೆಯು ಶಿಥಿಲಾವಸ್ಥೆಗೊಳಗಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ನೀರು ಬಿಡುಗಡೆಗೆ ಸುಪ್ರಿಂಕೋರ್ಟ್ ಆದೇಶ: ಬೀದಿಗಿಳಿದ ರೈತರು
ಕರ್ನಾಟಕದಿಂದ ತಮಿಳುನಾಡಿಗೆ 10ಸಾವಿರ ಕ್ಯೂಸೆಕ್ಸ್ ನೀರನ್ನು ಪ್ರತಿದಿನ ಬಿಡುವಂತೆ ಸುಪ್ರಿಂಕೋರ್ಟ್ ಆದೇಶ ನೀಡುತ್ತಿದ್ದಂತೆಯೇ ಮಂಡ್ಯ ಹಾಗೂ ಮದ್ದೂರಿನಲ್ಲಿ ರೈತರು ಬೀದಿಗಿಳಿದಿದ್ದು, ಮದ್ದೂರು ಸಮೀಪದ ಗೆಜ್ಜಲಗೆರೆ ಬಳಿ ಹೆದ್ದಾರಿ ತಡೆ ನಡೆಸಿ ಚಳುವಳಿ ಮುಂದುವರೆಸಿದ್ದಾರೆ.
ಬೆಂಗಳೂರಿನ ಐಐಎಂ-ಬಿಗೆ ಹುಸಿ ಬಾಂಬ್ ಕರೆ
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಬೆಂಗಳೂರು(ಐಐಎಂ-ಬಿ) ಗೆ ಬಾಂಬ್ ಕರೆ ಬಂದಿದ್ದು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಶೋಧಿಸಿದಾಗ ಇದು ಹುಸಿ ಕರೆಯೆಂದು ತಿಳಿದುಬಂದಿದೆ.
ಎಪಿಎಲ್ -ಬಿಪಿಎಲ್ ಕಾರ್ಡ್ ದಾರರೇ ಅಕ್ಕಿ ಸಿಗೋದು ಫುಲ್ ಡೌಟು!
ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರೇ ಹುಷಾರ್..! ಮುಂದಿನ ತಿಂಗಳು ನಿಮಗೆ ಅಕ್ಕಿ ಸಿಗುವುದು ಬಹುತೇಕ ಅನುಮಾನ ಕಾರಣ ರಾಜ್ಯದ ಗೋದಾಮಿನಲ್ಲಿ ಇರುವ ಅಕ್ಕಿಗೆ ನುಸಿಬಾಧೆ ತಗುಲಿದ್ದು..
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಬಂಗಾಳಿ ದ್ವಿತೀಯ ಭಾಷೆ
ಬೆಂಗಳೂರು: ಕರ್ನಾಟಕದಲ್ಲಿ ಬಂಗಾಳಿ ಭಾಷೆಯನ್ನು ಈ ಶೈಕ್ಷಣಿಕ ವರ್ಷದಿಂದ ದ್ವಿತೀಯ ಭಾಷೆಯನ್ನಾಗಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಸಮುದಾಯದವರು ದೀರ್ಘ ಸಮಯದಿಂದ ಈ ಬಗ್ಗೆ ಮನವಿ...
ಅನಂತಮೂರ್ತಿ ಹಿಂದಿಕ್ಕಿ ಬೂಕರ್ ಪಡೆದ ಅಮೆರಿಕಾದ ಲೇಖಕಿ
ಲಂಡನ್: ಕರ್ನಾಟಕದ ಸಾಹಿತಿ ಯು. ಆರ್. ಅನಂತಮೂರ್ತಿ ಅವರು 2013ರ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯಿಂದ ಕೂದಲೆಳೆಯ ಅಂತರದಲ್ಲಿ ವಂಚಿತರಾಗಿದ್ದಾರೆ. ಅನಂತಮೂರ್ತಿ ಅವರನ್ನು ಹಿಂದಿಕ್ಕಿದ ಅಮೆರಿಕಾದ ಲೇಖಕಿ ಲೈಡಿಯಾ
ಬಿಸಿಸಿಐ ಅಧ್ಯಕ್ಷನ ಅಳಿಯನೂ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ?
ಮುಂಬಯಿ: ಸ್ಪಾಟ್ ಫಿಕ್ಸಿಂಗ್ ನ ನೀರು ಬಿಸಿಸಿಐ ಕಾಲಬುಡಕ್ಕೆ ಬಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೆಯಪ್ಪನ್ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ನಾನು ಮುಗ್ದ, ಯಾವುದೇ ತಪ್ಪು ಮಾಡಿಲ್ಲ: ಶ್ರೀಶಾಂತ್
ಹೊಸದಿಲ್ಲಿ: ನಾನು ಮುಗ್ದ ಮತ್ತು ಯಾವುದೇ ತಪ್ಪನ್ನು ಮಾಡಿಲ್ಲ. ನಾನು ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿಲ್ಲ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡ...
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

Write Your Comment Here...