ಮದ್ಯ ಮಾರಾಟ: ಇಬ್ಬರು ಆರೋಪಿಗಳ ಬಂಧನ
[Updated 01/06/2012 04:02 pm]ಚಿತ್ರದುರ್ಗ, ಜೂನ್ 1: ಹೊಸದುರ್ಗ ತಾಲ್ಲೂಕಿನ ಸಣ್ಣಕಿಟ್ಟದಹಳ್ಳಿ ಗ್ರಾಮದಲ್ಲಿ ಹೊಸದುರ್ಗ ಪೊಲೀಸ್ ಠಾಣೆಯ ಪಿಎಸ್ಐ.ಮಂಜುನಾಥ್ ಅವರು ತಮ್ಮ ಸಿಬ್ಬಂದಿಯವರೊಂದಿಗೆ ಇಂದು ಬೆಳಿಗ್ಗೆ ಎರಡು ಕಡೆ ದಾಳಿ ಮಾಡಿ ಯಾವುದೇ ಪರವಾನಿಗೆ ಇಲ್ಲದೇ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅದೇ ಗ್ರಾಮದ ವಾಸಿ ಹನುಮಂತಪ್ಪ ತಂದೆ ಆಚಾರಿ ಎಂಬುವನನ್ನು ಬಂಧಿಸಿದ್ದಾರೆ.

ಸ್ಥಳದಲ್ಲಿದ್ದ ದೊರೆತ 1,125ರೂಪಾಯಿ ಬೆಲೆಯ 180 ಎಂಎಲ್ ನ 25 ರಾಜಾ ವಿಸ್ಕಿ ಬಾಟಲಿಗಳನ್ನು ವಶಪಡಿಸಿಕೊಂಡಿರುತ್ತಾರೆ ಹಾಗೂ ಅದೇ ಗ್ರಾಮದ ಎ.ಕೆ.ಕಾಲೋನಿಯಲ್ಲಿ ಇದೇ ರೀತ್ಯಾ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗಿರೀಶ ಎಂಬಾತನನ್ನು ಬಂಧಿಸಿ, ಆತನಿಂದ 1,260 ರೂಪಾಯಿ ಬೆಲೆಯ 180 ಎಂಎಲ್ ನ 28 ರಾಜಾ ವಿಸ್ಕಿ ಬಾಟಲಿಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿರುತ್ತದೆ.
ನಂಜನಗೂಡಿನಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ
ದಕ್ಷಿಣ ಕಾಶಿ ಶ್ರೀಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಧನುರ್ಮಾಸದಲ್ಲಿ ನಡೆಯುವ ಷಷ್ಠಿ ಸುಬ್ರಹ್ಮಣ್ಯೇಶ್ವರ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ನೂರಾರು ಭಕ್ತರು ಶ್ರದ್ಧಾಭಕ್ತಿಯಿಂದ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥ ಎಳೆದು ಪುನೀತರಾದರು.
ಧೂಳುಮಯ ರಸ್ತೆ: ತಿ.ನರಸೀಪುರ ಬಂದ್ಗೆ ನಿರ್ಧಾರ
ಪಟ್ಟಣದ ಪ್ರಮುಖ ರಸ್ತೆಗಳನ್ನು ಧೂಳಿನಿಂದ ಮುಕ್ತ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಲು ಆಗ್ರಹಿಸಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳ ಜಡತ್ವವನ್ನು ಬಿಡಿಸಲು ನಾಗರೀಕ ಸೇವಾ ವೇದಿಕೆ ನರಸೀಪುರ ಬಂದ್ ಹೋರಾಟಕ್ಕೆ ನಿರ್ಧರಿಸಿದೆ.
ತಿ.ನರಸೀಪುರದಲ್ಲಿ ಮರಳು ನೀತಿ ಉಲ್ಲಂಘಿಸಿ ದಂಧೆ
ಮರಳು ನೀತಿಯನ್ನು ಜಾರಿಗೆ ತಂದ ಸರ್ಕಾರದ ಅಸಡ್ಡೆ, ಅಧಿಕಾರಿಗಳಿಗೆ ಹಣದ ಮೇಲಿರುವ ಮಮತೆಯಿಂದಾಗಿ ಇಷ್ಟೊತ್ತಿಗಾಗಲೇ ನಿಯಂತ್ರಣಗೊಳ್ಳಬೇಕಿದ್ದ ಅಕ್ರಮ ಮರಳು ದಂಧೆ ಮರಳು ನೀತಿಯನ್ನೇ ನಿರಂತರವಾಗಿ ಉಲ್ಲಂಘಿಸಿ ವ್ಯಾಪಕಗೊಳ್ಳುತ್ತಿದೆ.
ನಂಜನಗೂಡಿನಲ್ಲಿ ನಿಲ್ಲದ ಬೀದಿನಾಯಿಗಳ ಹಾವಳಿ
ನಂಜನಗೂಡಿನಲ್ಲಿ ಬೀದಿನಾಯಿಗಳನ್ನು ಹಿಡಿದು ಕಾಡಿಗೆ ಬಿಟ್ಟರೂ ಅವುಗಳ ಹಾವಳಿ ಮಾತ್ರ ಕಡಿಮೆಯಾದಂತೆ ಕಂಡುಬರುತ್ತಿಲ್ಲ. ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಂಡು ಬರುತ್ತಿರುವ ಬೀದಿ ನಾಯಿಗಳ ಸಂಖ್ಯೆ ಸುಮಾರು ಒಂದು ಸಾವಿರಕ್ಕೂ ಮೀರಿದೆ...
ಚಿಕ್ಕರಸಿನಕೆರೆ ಬಸಪ್ಪನಿಗೆ ಪುಷ್ಪಾಭಿಷೇಕ
ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸಪ್ಪನಿಗೆ 10ಸಾವಿರಕ್ಕೂ ಹೆಚ್ಚು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪುಷ್ಪಾಭಿಷೇಕ ನೆರವೇರಿಸಲಾಯಿತು.
ತಮಿಳುನಾಡಿಗೆ ನೀರು: ಮದ್ದೂರಿನಲ್ಲಿ ಪ್ರತಿಭಟನೆ
ಪಟ್ಟಣದ ಟಿಬಿ ವೃತ್ತದಲ್ಲಿ ವಿಶ್ವ ಒಕ್ಕಲಿಗರ ಜನ ಜಾಗೃತಿ ವೇದಿಕೆಯ ಕಾರ್ಯಕರ್ತರು ತಮಿಳುನಾಡಿಗೆ ಕೆಆರ್ ಎಸ್ ಅಣೆಕಟ್ಟೆಯಿಂದ ನೀರು ಬಿಡುವುದನ್ನು ಖಂಡಿಸಿ ಹೆದ್ದಾರಿ ತಡೆ ನಡೆಸಿದರು.
ಭಾರತೀನಗರದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಿಧನ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ 1960ರ ಕಾಲಾವಧಿಯ ಚಲನಚಿತ್ರ ಸ್ಟಿಲ್ ಛಾಯಾಗ್ರಾಹಕರಾದ ಭಾರತೀನಗರದ ಜಿ.ಎಸ್.ಗಂಗಾಧರ್ (85) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಗೆಜ್ಜಲಗೆರೆಯಲ್ಲಿ ಮುಂದುವರೆದ ಹೆದ್ದಾರಿ ತಡೆ ಪ್ರತಿಭಟನೆ
ತಾಲ್ಲೂಕಿನ ಗೆಜ್ಜಲಗೆರೆ ಬಳಿ ರೈತ ಸಂಘದ ಕಾರ್ಯಕರ್ತರು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಹೆದ್ದಾರಿ ತಡೆ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ಅಪಾಯಕ್ಕೆ ಆಹ್ವಾನ ನೀಡುವ ಸೇತುವೆ
ಸರಗೂರು ಸಮೀಪದ ಸಾಗರೆ ಗ್ರಾಮದ ಮಾರಮ್ಮ ದೇವಾಲಯದ ಹಿಂಭಾಗದ ಕಬಿನಿ ಬಲದಂಡ ನಾಲೆಯ ಸೇತುವೆಯು ಶಿಥಿಲಾವಸ್ಥೆಗೊಳಗಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ನೀರು ಬಿಡುಗಡೆಗೆ ಸುಪ್ರಿಂಕೋರ್ಟ್ ಆದೇಶ: ಬೀದಿಗಿಳಿದ ರೈತರು
ಕರ್ನಾಟಕದಿಂದ ತಮಿಳುನಾಡಿಗೆ 10ಸಾವಿರ ಕ್ಯೂಸೆಕ್ಸ್ ನೀರನ್ನು ಪ್ರತಿದಿನ ಬಿಡುವಂತೆ ಸುಪ್ರಿಂಕೋರ್ಟ್ ಆದೇಶ ನೀಡುತ್ತಿದ್ದಂತೆಯೇ ಮಂಡ್ಯ ಹಾಗೂ ಮದ್ದೂರಿನಲ್ಲಿ ರೈತರು ಬೀದಿಗಿಳಿದಿದ್ದು, ಮದ್ದೂರು ಸಮೀಪದ ಗೆಜ್ಜಲಗೆರೆ ಬಳಿ ಹೆದ್ದಾರಿ ತಡೆ ನಡೆಸಿ ಚಳುವಳಿ ಮುಂದುವರೆಸಿದ್ದಾರೆ.
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಐಪಿಎಲ್ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ನಕಾರ
ಹೊಸದಿಲ್ಲಿ: ಸ್ಪಾಟ್ ಫಿಕ್ಸಿಂಗ್ ನಿಂದಾಗಿ ಐಪಿಎಲ್ ನ ಮುಂದಿನ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಕೆಲವು ಆಟಗಾರರು ಅಕ್ರಮದಲ್ಲಿ ತೊಡಗಿದ್ದಾರೆಂಬ ಕಾರಣಕ್ಕೆ ಐಪಿಎಲ್ ನ್ನು ಸಂಪೂರ್ಣವಾಗಿ
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.

Write Your Comment Here...