ಮೈದುಂಬಿ ಹರಿಯುತ್ತಿದೆ ರಾಜ್ಯದ ನದಿಗಳು...
[Updated 08/08/2012 10:32 am]ಬೆಂಗಳೂರು: ಕಳೆದ ಜೂನ್ ನಲ್ಲಿ ನೈರುತ್ಯ ಮುಂಗಾರು ಶೇ.33ರಷ್ಟು ಕೊರತೆ ಕಾಣಿಸಿಕೊಂಡಿರುವ ಆತಂಕದ ನಡುವೆ ಆಗಸ್ಟ್ ನಲ್ಲಿ ಮುಂಗಾರು ಮಾರುತ ಗಣನೀಯ ಪ್ರಮಾಣದಲ್ಲಿ ಚೇತರಿಸಿಕೊಂಡಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವರಾಹಿ, ಕುಬ್ಜಾ, ಸೌಪರ್ಣಿಕಾ, ಚಕ್ರಾ ನದಿಗಳು ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದು, ನಾವುಂದ, ಸೇನಾಪುರ, ಬಡಾಕೆರೆ, ನಾಡ- ಗುಡ್ಡೆಯಂಗಡಿಗಳಲ್ಲಿರುವ ತಗ್ಗು ಪ್ರದೇಶದ ಕೃಷಿಭೂಮಿ ಜಲಾವೃತಗೊಂಡಿದೆ. ಈ ಮಧ್ಯೆ ಬೈಂದೂರು ಸಮೀಪದ ಅಳಿವೆ ಗದ್ದೆಯಲ್ಲಿ ಸಮುದ್ರಕ್ಕೆ ಇಳಿದ ದೋಣಿ ಕಲ್ಲಿಗೆ ಬಡಿದು ಸುಮಾರು 30 ಲಕ್ಷ ರೂ.ಪಾಯಿ ಹಾನಿ ಉಂಟಾಗಿದೆ. 
ಬಳ್ಳಾರಿ ಜಿಲ್ಲೆಯ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಿರುವುದರಿಂದ ಜಲಾಶಯದ ಎಡ ಹಾಗೂ ಬಲದಂಡೆ ಕೆಳ ಹಾಗೂ ಮೇಲ್ಮಟ್ಟದ ಕಾಲುವೆಗಳಿಗೆ ನೀರು ಹರಿ ಬಿಡಲಾಗಿದೆ. ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ 55 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯಕ್ಕೆ ಹೆಚ್ಚಿನ ಮಟ್ಟದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕಾಲುವೆಗಳ ಮೂಲಕ ನಾಲ್ಕುವರೆ ಸಾವಿರ ಕ್ಯೂಸೆಕ್ಸ್ ನೀರು ಹರಿಬಿಡಲಾಗಿದೆ. ಇದರಿಂದಾಗಿ ತುಂಗಭದ್ರ ಅಚ್ಚುಕಟ್ಟು ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದಲ್ಲಿ ಅಂದರೆ ಶೇ.360 ಮಿ.ಮೀ.ನಷ್ಟು ಮಳೆಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 152 ಮಿ.ಮೀ. ಮಳೆ ಸುರಿಯಬೇಕಾಗಿತ್ತು. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ. 86 ಮತ್ತು ಶೇ.34ರಷ್ಟು ಹೆಚ್ಚುವರಿ ಮಳೆ ಬಿದ್ದಿದೆ.
ಕಾವೇರಿ, ಶರಾವತಿ, ಹೇಮಾವತಿ, ಲಕ್ಷ್ಮಣ ತೀರ್ಥ, ತುಂಗ ಭದ್ರಾ ಮತ್ತಿತರ ನದಿಗಳಿಗೆ ನೀರಿನ ಹರಿವು ಹೆಚ್ಚಾಗಿದ್ದು, ಪ್ರವಾಹ ಪರಿಸ್ಧಿತಿ ನಿರ್ಮಾಣವಾಗಿದೆ. ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕೃಷ್ಣಾ ನದಿಪಾತ್ರದ ಅಲಮಟ್ಟಿ, ಕಾವೇರಿ ನದಿ ತಟದ ಗೋರೂರು, ಕಬಿನಿ ಜಲಾಶಯಗಳು ಭರ್ತಿಯಾಗಿವೆ. ಇದರಿಂದಾಗಿ ಸರ್ಕಾರ ಹಾಗೂ ರೈತರಿಗೆ ಸ್ವಲ್ಪ ಮಟ್ಟಿನ ನೆಮ್ಮದಿ ದೊರೆತಂತಾಗಿದೆ.
ಮುಂಗಾರು ಮಳೆ ಐದು ಜಿಲ್ಲೆಗಳಲ್ಲಿ ತೀವ್ರಗೊಂಡಿದೆ. ಎಂಟು ಜಿಲ್ಲೆಗಳಲ್ಲಿ ಸಮರ್ಪಕವಾಗಿ ಮಳೆ ಸುರಿಯುತ್ತಿದ್ದು, ಏಳು ಜಿಲ್ಲೆಗಳಲ್ಲಿ ಸಾಮಾನ್ಯವಾಗಿದೆ. ಏಳು ಜಿಲ್ಲೆಗಳಲ್ಲಿ ಮಳೆ ಮುಂಗಾರು ದುರ್ಬಲವಾಗಿದೆ. ಶಿವಮೊಗ್ಗ ಜಿಲ್ಲೆ ಕರೂರಿನಲ್ಲಿ ಗರಿಷ್ಠ ಎಂದರೆ 33.6 ಮಿ.ಮೀ. ಮಳೆಯಾಗಿದೆ.
State rivers overflowing
Bangalore: Several rivers in Karnataka are overflowing, thanks to the incessant downpour which various parts of the state are experiencing since the past few days. A record 360mm rainfall has been recorded in the Malnad and coastal region.
ಬಿಸಿಸಿಐ ಅಧ್ಯಕ್ಷನ ಅಳಿಯನೂ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ?
ಮುಂಬಯಿ: ಸ್ಪಾಟ್ ಫಿಕ್ಸಿಂಗ್ ನ ನೀರು ಬಿಸಿಸಿಐ ಕಾಲಬುಡಕ್ಕೆ ಬಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೆಯಪ್ಪನ್ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ನಾನು ಮುಗ್ದ, ಯಾವುದೇ ತಪ್ಪು ಮಾಡಿಲ್ಲ: ಶ್ರೀಶಾಂತ್
ಹೊಸದಿಲ್ಲಿ: ನಾನು ಮುಗ್ದ ಮತ್ತು ಯಾವುದೇ ತಪ್ಪನ್ನು ಮಾಡಿಲ್ಲ. ನಾನು ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿಲ್ಲ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡ...
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಸಂಜಯ್ ದತ್ ಪುಣೆಯ ಯೆರವಾಡ ಜೈಲಿಗೆ
ಮುಂಬಯಿ: 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ನ್ನು ಪುಣೆಯ ಯೆರವಾಡ ಜೈಲಿಗೆ ಸ್ಥಳಾಂತರಿಸಲಾಗಿದೆ. ಮೇ 16ರಂದು ದತ್ ವಿಶೇಷ ಟಾಡಾ ಕೋರ್ಟ್ ಮುಂದೆ ಶರಣಾಗಿದ್ದರು.
ಚೆನ್ನೈ ಪೊಲೀಸರ ದಾಳಿ: 6 ಮಂದಿ ಬುಕ್ಕಿಗಳ ಸೆರೆ
ಚೆನ್ನೈ: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ನ ಮೂರು ಮಂದಿ ಆಟಗಾರರು ಸಿಕ್ಕಿಬಿದ್ದ ಮರುದಿನ ಚೆನ್ನೈ ಪೊಲೀಸರು 10 ಕಡೆಗಳಲ್ಲಿ ದಾಳಿ ಮಾಡಿ 6 ಮಂದಿ ಬುಕ್ಕಿಗಳನ್ನು ಬಂಧಿಸಿದ್ದಾರೆ.
ದೆಹಲಿಯಲ್ಲಿ ವೈದ್ಯನಿಂದ ರೋಗಿಯ ಅತ್ಯಾಚಾರ
ಹೊಸದಿಲ್ಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಯ 51ರ ಹರೆಯದ ವೈದ್ಯ ತನ್ನ ಕ್ಲಿನಿಕ್ ನಲ್ಲಿ 21ರ ಹರೆಯದ ರೋಗಿಯೊಬ್ಬಳನ್ನು ಅತ್ಯಾಚಾರ ಮಾಡಿದ ಪ್ರಕರಣ ನಡೆದಿದೆ. ದೆಹಲಿಯ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಯಲ್ಲಿ
ದೆಹಲಿಯಲ್ಲಿ 12ನೇ ತರಗತಿ ಬಾಲಕಿಯ ಗುಂಡಿಕ್ಕಿ ಹತ್ಯೆ
ಹೊಸದಿಲ್ಲಿ: ದಕ್ಷಿಣ ದೆಹಲಿಯಲ್ಲಿ 12ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹುಡುಗನೊಬ್ಬ ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಮುನಿಕ್ರಾ ಪ್ರದೇಶದ ಬುಧ ವಿಹಾರ್ ಪ್ರದೇಶದಲ್ಲಿರುವ
ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮುಂಬಯಿ: ಮಹಾರಾಷ್ಟ್ರದ ಬಿಜೆಪಿಯ ಎಂಎಲ್ ಸಿ ಮಧು ಚೌವಾಣ್ ತನ್ನ ಪಕ್ಷದ ಮಾಜಿ ಕಾರ್ಯಕರ್ತೆಯನ್ನು ಅತ್ಯಾಚಾರ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ.
ಮಧು ಚೌವಾಣ್ ವಿರುದ್ಧ ಮುಂಬಯಿ ಪೊಲೀಸರು
ಹಲ್ಲೆಗೊಳಗಾಗಿದ್ದ ಪಾಕ್ ಕೈದಿ ಸಾವು
ಚಂಡೀಗಡ: ಜಮ್ಮು ಜೈಲಿನಲ್ಲಿ ಕಳೆದ ವಾರ ಸಹ ಕೈದಿಗಳಿಂದ ಹಲ್ಲೆಗೊಳಗಾಗಿದ್ದ ಪಾಕಿಸ್ತಾನದ ಕೈದಿ ಸಾನುಲ್ಲಾ ರಂಜಾಯ್ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಹತ್ಯೆ ಪ್ರಕರಣ: ತಲ್ವಾರ್ ದಂಪತಿ ಹೇಳಿಕೆ ದಾಖಲಿಸಲು ಕೋರ್ಟ್ ಆದೇಶ
ಘಜಿಯಾಬಾದ್: ಆರುಷಿ-ಹೇಮರಾಜ್ ಹತ್ಯಾ ಪ್ರಕರಣದಲ್ಲಿ ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯವು ರಾಜೇಶ್ ಮತ್ತು ನುಪುರ್ ತಲ್ವಾರ್ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.
ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ದೇಹದ ಮೇಲಿತ್ತು ಕಚ್ಚಿದ ಗುರುತು!
ಹೊಸದಿಲ್ಲಿ: ಕಳೆದ ವರ್ಷ ಡಿಸೆಂಬರ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಇಬ್ಬರು ಕಚ್ಚಿದ ಗುರುತುಗಳಿದ್ದವು ಎಂದು ಹೇಳಲಾಗಿದೆ. ಈ ಎರಡು ಗುರುತುಗಳು
ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ, ಕಚೇರಿಗೆ ಐಟಿ ದಾಳಿ
ಮುಂಬಯಿ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ ಹಾಗೂ ಕಚೇರಿಗೆ ದಾಳಿ ಮಾಡಿದ್ದಾರೆ. ಕಿರುತೆರೆಯಲ್ಲಿ ತನ್ನ ಧಾರಾವಾಹಿಗಳಿಂದ ಹೆಚ್ಚಿನ ಪ್ರಚಾರವನ್ನು ಪಡೆದುಕೊಂಡಿರುವ
ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆತಂದ ಬಿಹಾರದ ಕಾಂಗ್ರೆಸ್ ಶಾಸಕ
ಪಟ್ನಾ: ಜನರಿಗೆ ಮೂಲಭೂತ ಸೌಲಭ್ಯಗಳಿಲ್ಲದಿದ್ದರೂ ನಮ್ಮ ರಾಷ್ಟ್ರದ ಎಲ್ಲಾ ರಾಜ್ಯಗಳ ಶಾಸಕರು ತಮ್ಮ ಶ್ರೀಮಂತಿಕೆಯನ್ನು ತೋರಿಸುವುದರಲ್ಲಿ ಹಿಂದೆ ಬಿದ್ದಿಲ್ಲ. ಬಿಹಾರದಲ್ಲಿ ಕಾಂಗ್ರೆಸ್ ನ ಶಾಸಕನೊಬ್ಬ ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆದುಕೊಂಡು ಬಂದಿದ್ದಾನೆ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.

Write Your Comment Here...