ರಾಜ್ಯ ಬಿಜೆಪಿ ನಾಯಕರಿಗೆ ಅಹವಾಲು ಸಲ್ಲಿಕೆ ದಿನ!
[Updated 03/07/2012 02:25 pm]ಹೊಸದಿಲ್ಲಿ: ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ಬಿಕ್ಕಟ್ಟಿನ ನಿವಾರಣೆಗೆ ದೆಹಲಿಗೆ ದಾವಿಸಿರುವ ಉಭಯ ಬಣಗಳ ಮುಖಂಡರು ಮಂಗಳವಾರ ರಾಷ್ಟ್ರೀಯ ವರಿಷ್ಠರನ್ನು ಭೇಟಿ ಮಾಡಿ ತಮ್ಮ ತಮ್ಮ ಅಹವಾಲುಗಳನ್ನು ನಿವೇದಿಸಿಕೊಳ್ಳುತ್ತಿದ್ದಾರೆ.
ಮಂಗಳವಾರ ಬೆಳಗ್ಗೆಯಿಂದಲೇ ಪಕ್ಷದ ರಾಷ್ಟ್ರೀಯ ಮುಖಂಡರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್ ಈಶ್ವರಪ್ಪ, ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಸೇರಿದಂತೆ ಯಡಿಯೂರಪ್ಪ ಪಾಳಯದಲ್ಲಿ ಗುರುತಿಸಿಕೊಂಡಿರುವ ಸಚಿವ ಬಸವರಾಜ ಬೊಮ್ಮಾಯಿ ಮತ್ತಿತರರು ಭೇಟಿ ನೀಡಿ ತಮ್ಮ ತಮ್ಮ ಅಭಿಪ್ರಾಯಗಳನ್ನು ವಿವರಿಸುತ್ತಿದ್ದಾರೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ಕಡು ವಿರೋಧಿ ಎಂದೇ ಬಿಂಬಿತವಾಗಿರುವ ರಾಜ್ಯದವರೇ ಆದ ಅನಂತ್ ಕುಮಾರ್ ಅವರನ್ನು ಈಶ್ವರಪ್ಪ, ಸದಾನಂದಗೌಡ ಭೇಟಿ ಮಾಡಿ ಮಾತುಕತೆ ನಡೆಸಿದರು.
ದೆಹಲಿಯ ತುಘಲಕ್ ರಸ್ತೆಯಲ್ಲಿರುವ ಅನಂತ್ ಕುಮಾರ್ ನಿವಾಸದಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ಯಡಿಯೂರಪ್ಪ ಬಣದ ಸಚಿವ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಇದಾದ ನಂತರ ಮುಖ್ಯಮಂತ್ರಿ ಸದಾನಂದಗೌಡ ಅವರು, ದೆಹಲಿಯ ಅಶೋಕ ರಸ್ತೆಯಲ್ಲಿರುವ ಪಕ್ಷದ ರಾಷ್ಟ್ರೀಯ ಕಚೇರಿಗೆ ಭೇಟಿ ನೀಡಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ವರ್ತೂರು ಪ್ರಕಾಶ್ ಹಾಜರಿದ್ದರು.
ಪಕ್ಷದ ಮತ್ತೋರ್ವ ರಾಷ್ಟ್ರೀಯ ಮುಖಂಡ ಅರುಣ್ ಜೇಟ್ಲಿ ಅವರನ್ನು ಈಶ್ವರಪ್ಪ ಮತ್ತು ಮುಖ್ಯಮಂತ್ರಿ ಸದಾನಂದಗೌಡ ಅವರು ಭೇಟಿಯಾಗಿ ಚರ್ಚೆ ನಡೆಸಿದರು. ಈ ಎಲ್ಲ ಬೆಳವಣಿಗೆಗಳು ನಡೆಯುವುದಕ್ಕೂ ಮುನ್ನ ಮುಖ್ಯಮಂತ್ರಿ ಸದಾನಂದಗೌಡ ಪಕ್ಷದ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ರಾಜ್ಯದ ಪಕ್ಷದಲ್ಲಿನ ವಿದ್ಯಮಾನಗಳನ್ನು ಮನವರಿಕೆ ಮಾಡಿಕೊಟ್ಟು ತದನಂತರ ಪ್ರತ್ಯೇಕವಾಗಿ ಹಿರಿಯ ಮುಖಂಡರಾದ ರಾಜನಾಥ್ ಸಿಂಗ್ ಹಾಗೂ ಮುರುಳಿ ಮನೋಹರ್ ಜೋಶಿ ಅವರನ್ನೂ ಸಹ ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಮುಖ್ಯಮಂತ್ರಿಯವರು ದೆಹಲಿಯ ರೈಸಿನಾಹಿಲ್ಸ್ ನಲ್ಲಿರುವ ಮುರುಳಿ ಮನೋಹರ್ ಜೋಶಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲೇ ಗೃಹ ಸಚಿವ ಆರ್. ಅಶೋಕ್ ಹಾಗೂ ಮುಖ್ಯಮಂತ್ರಿ ಗಾದಿ ಆಕಾಂಕ್ಷಿ ಎನ್ನಲಾದ ಜಗದೀಶ್ ಶೆಟ್ಟರ್ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು.
ಮುಖ್ಯಮಂತ್ರಿ ಸದಾನಂದಗೌಡ, ರಾಜ್ಯಾಧ್ಯಕ್ಷ ಕೆ.ಎಸ್ ಈಶ್ವರಪ್ಪ ಅವರು ನಡೆಸುತ್ತಿರುವ ಕಾರ್ಯತಂತ್ರಗಳನ್ನು ದೆಹಲಿಯಲ್ಲಿಯೇ ಬೀಡು ಬಿಟ್ಟಿರುವ ಯಡಿಯೂರಪ್ಪ ಬಣದ ಸಚಿವರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಇದಕ್ಕೆ ಪ್ರತಿಯಾಗಿ ತಾವೇನು ಕಾರ್ಯತಂತ್ರ ರೂಪಿಸಬೇಕೆಂಬುದರ ಬಗ್ಗೆ ಪರಸ್ಪರ ಚರ್ಚೆಯಲ್ಲಿ ತೊಡಗಿ ದೆಹಲಿಯ ಕ್ಷಣ ಕ್ಷಣದ ಬೆಳವಣಿಗೆಗಳನ್ನು ಬೆಂಗಳೂರಿನಲ್ಲಿರುವ ತಮ್ಮ ನಾಯಕ ಯಡಿಯೂರಪ್ಪ ಅವರಿಗೆ ರವಾನಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
State BJP leaders air woes, place demands before high command
New Delhi: BJP leaders of the dissident factions in Karnataka who are in New Delhi have been meeting the high command leaders and placing forth their views and demands. Already, CM Sadananda Gowda, Karnataka BJP Chief Eshwarappa, Basavaraj Bommai of Yeddy faction and others have met top party leaders
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಐಪಿಎಲ್ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ನಕಾರ
ಹೊಸದಿಲ್ಲಿ: ಸ್ಪಾಟ್ ಫಿಕ್ಸಿಂಗ್ ನಿಂದಾಗಿ ಐಪಿಎಲ್ ನ ಮುಂದಿನ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಕೆಲವು ಆಟಗಾರರು ಅಕ್ರಮದಲ್ಲಿ ತೊಡಗಿದ್ದಾರೆಂಬ ಕಾರಣಕ್ಕೆ ಐಪಿಎಲ್ ನ್ನು ಸಂಪೂರ್ಣವಾಗಿ
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಚೆನ್ನೈ ಪೊಲೀಸರ ದಾಳಿ: 6 ಮಂದಿ ಬುಕ್ಕಿಗಳ ಸೆರೆ
ಚೆನ್ನೈ: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ನ ಮೂರು ಮಂದಿ ಆಟಗಾರರು ಸಿಕ್ಕಿಬಿದ್ದ ಮರುದಿನ ಚೆನ್ನೈ ಪೊಲೀಸರು 10 ಕಡೆಗಳಲ್ಲಿ ದಾಳಿ ಮಾಡಿ 6 ಮಂದಿ ಬುಕ್ಕಿಗಳನ್ನು ಬಂಧಿಸಿದ್ದಾರೆ.
ದೆಹಲಿಯಲ್ಲಿ ವೈದ್ಯನಿಂದ ರೋಗಿಯ ಅತ್ಯಾಚಾರ
ಹೊಸದಿಲ್ಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಯ 51ರ ಹರೆಯದ ವೈದ್ಯ ತನ್ನ ಕ್ಲಿನಿಕ್ ನಲ್ಲಿ 21ರ ಹರೆಯದ ರೋಗಿಯೊಬ್ಬಳನ್ನು ಅತ್ಯಾಚಾರ ಮಾಡಿದ ಪ್ರಕರಣ ನಡೆದಿದೆ. ದೆಹಲಿಯ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಯಲ್ಲಿ
ದೆಹಲಿಯಲ್ಲಿ 12ನೇ ತರಗತಿ ಬಾಲಕಿಯ ಗುಂಡಿಕ್ಕಿ ಹತ್ಯೆ
ಹೊಸದಿಲ್ಲಿ: ದಕ್ಷಿಣ ದೆಹಲಿಯಲ್ಲಿ 12ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹುಡುಗನೊಬ್ಬ ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಮುನಿಕ್ರಾ ಪ್ರದೇಶದ ಬುಧ ವಿಹಾರ್ ಪ್ರದೇಶದಲ್ಲಿರುವ
ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮುಂಬಯಿ: ಮಹಾರಾಷ್ಟ್ರದ ಬಿಜೆಪಿಯ ಎಂಎಲ್ ಸಿ ಮಧು ಚೌವಾಣ್ ತನ್ನ ಪಕ್ಷದ ಮಾಜಿ ಕಾರ್ಯಕರ್ತೆಯನ್ನು ಅತ್ಯಾಚಾರ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ.
ಮಧು ಚೌವಾಣ್ ವಿರುದ್ಧ ಮುಂಬಯಿ ಪೊಲೀಸರು
ಹಲ್ಲೆಗೊಳಗಾಗಿದ್ದ ಪಾಕ್ ಕೈದಿ ಸಾವು
ಚಂಡೀಗಡ: ಜಮ್ಮು ಜೈಲಿನಲ್ಲಿ ಕಳೆದ ವಾರ ಸಹ ಕೈದಿಗಳಿಂದ ಹಲ್ಲೆಗೊಳಗಾಗಿದ್ದ ಪಾಕಿಸ್ತಾನದ ಕೈದಿ ಸಾನುಲ್ಲಾ ರಂಜಾಯ್ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಹತ್ಯೆ ಪ್ರಕರಣ: ತಲ್ವಾರ್ ದಂಪತಿ ಹೇಳಿಕೆ ದಾಖಲಿಸಲು ಕೋರ್ಟ್ ಆದೇಶ
ಘಜಿಯಾಬಾದ್: ಆರುಷಿ-ಹೇಮರಾಜ್ ಹತ್ಯಾ ಪ್ರಕರಣದಲ್ಲಿ ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯವು ರಾಜೇಶ್ ಮತ್ತು ನುಪುರ್ ತಲ್ವಾರ್ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.
ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ದೇಹದ ಮೇಲಿತ್ತು ಕಚ್ಚಿದ ಗುರುತು!
ಹೊಸದಿಲ್ಲಿ: ಕಳೆದ ವರ್ಷ ಡಿಸೆಂಬರ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಇಬ್ಬರು ಕಚ್ಚಿದ ಗುರುತುಗಳಿದ್ದವು ಎಂದು ಹೇಳಲಾಗಿದೆ. ಈ ಎರಡು ಗುರುತುಗಳು
ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ, ಕಚೇರಿಗೆ ಐಟಿ ದಾಳಿ
ಮುಂಬಯಿ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ ಹಾಗೂ ಕಚೇರಿಗೆ ದಾಳಿ ಮಾಡಿದ್ದಾರೆ. ಕಿರುತೆರೆಯಲ್ಲಿ ತನ್ನ ಧಾರಾವಾಹಿಗಳಿಂದ ಹೆಚ್ಚಿನ ಪ್ರಚಾರವನ್ನು ಪಡೆದುಕೊಂಡಿರುವ
ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆತಂದ ಬಿಹಾರದ ಕಾಂಗ್ರೆಸ್ ಶಾಸಕ
ಪಟ್ನಾ: ಜನರಿಗೆ ಮೂಲಭೂತ ಸೌಲಭ್ಯಗಳಿಲ್ಲದಿದ್ದರೂ ನಮ್ಮ ರಾಷ್ಟ್ರದ ಎಲ್ಲಾ ರಾಜ್ಯಗಳ ಶಾಸಕರು ತಮ್ಮ ಶ್ರೀಮಂತಿಕೆಯನ್ನು ತೋರಿಸುವುದರಲ್ಲಿ ಹಿಂದೆ ಬಿದ್ದಿಲ್ಲ. ಬಿಹಾರದಲ್ಲಿ ಕಾಂಗ್ರೆಸ್ ನ ಶಾಸಕನೊಬ್ಬ ಹೆಲಿಕಾಪ್ಟರ್ ನಲ್ಲಿ ವಧುವನ್ನು ಕರೆದುಕೊಂಡು ಬಂದಿದ್ದಾನೆ.
ಪ್ರತಿಭಟನಾ ನಿರತ ಯುವತಿಯರ ಮೇಲೆ ಹಲ್ಲೆ: ಸುಪ್ರೀಂ ಪ್ರಶ್ನೆ
ಹೊಸದಿಲ್ಲಿ: ಐದರ ಹರೆಯದ ಬಾಲಕಿಯ ವಿರುದ್ಧ ಅತ್ಯಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುವತಿಯ ಮೇಲೆ ಕೈಮಾಡಿರುವುದು ಯಾಕೆಂದು ಸುಪ್ರೀಂ ಕೋರ್ಟ್, ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.

Write Your Comment Here...