ದಿನಕ್ಕೆ ಒಂದು ಬಾರಿ ಮಾತ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ
[Updated 07/08/2012 04:51 pm]ಗದಗ: ಇನ್ನು ಮುಂದೆ ದಿನಕ್ಕೆ ಒಂದು ಬಾರಿ ಮಾತ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಗದಗದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರಗತಿಪರಿಶೀಲನಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾದಿ ಬೀದಿಯಲ್ಲೆಲ್ಲಾ ಪ್ರತಿಕ್ರಿಯೆ ನೀಡುವುದಿಲ್ಲ. ಹಳೆಯ ಪದ್ಧತಿಗೆ ತಿಲಾಂಜಲಿ ಹಾಡಿದ್ದೇನೆ. ದಿನಕ್ಕೆ ಒಂದು ಬಾರಿ ಮಾತ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.
ನಂತರ ಗದಗ ಜಿಲ್ಲಾ ಆಡಳಿತ ಭವನದಲ್ಲಿ ನಡೆದ ಜಿಲ್ಲಾ ಪ್ರಗತಿಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಮತ್ತಿತರರು ಉಪಸ್ಥಿತರಿದ್ದರು.
CM to react to scribes only once
Gadag: Chief Minister Jagadish Shettar has informed that he would henceforth speak to the media only once during the day. He was speaking to reporters prior to a district progress review meet held at Gadag on Tuesday.
ಧಕ್ಕೆ ಬಾರದಂತೆ ಕಾರ್ಯನಿರ್ವಹಣೆ: ಅಂಬರೀಶ್
ಬೆಂಗಳೂರು: ಸಂಪುಟ ದರ್ಜೆಯ ಸಚಿವನ ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದ್ದು, ಯಾವುದೇ ರೀತಿಯ ಧಕ್ಕೆ ಬಾರದಂತೆ ಕಾರ್ಯನಿರ್ವಹಿಸುವುದಾಗಿ ನೂತನ ಸಚಿವ ಅಂಬರೀಶ್ ಹೇಳಿದ್ದಾರೆ.
ಸಿಎಂ ಬಳಿ ಪ್ರಮುಖ ಖಾತೆಗಳು!
ಬೆಂಗಳೂರು: ಗೃಹ ಇಲಾಖೆಯ ಹೊಣೆಗಾರಿಕೆಯನ್ನು ಕೆ.ಜೆ. ಜಾರ್ಚ್ ಅವರಿಗೆ ವಹಿಸಿರುವ ಸಿಎಂ ಹಣಕಾಸು, ಇಂಧನ, ಡಿಪಿಎಆರ್ ಸೇರಿದಂತೆ ಪ್ರಮುಖ ಹುದ್ದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ
ಲೇಹರ್ಸಿಂಗ್ ಬಿಜೆಪಿಯಿಂದ ಔಟ್!
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಲೇಹರ್ಸಿಂಗ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ರಾಜ್ಯ ಬಿಜೆಪಿ ಅಮಾನತ್ತುಗೊಳಿಸಿದೆ. ರಾಜ್ಯ ವಿಧಾನಸಭಾ ಫಲಿತಾಂಶದ ಬಗ್ಗೆ ಪಕ್ಷದ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ತಮ್ಮ ಬ್ಲಾಗ್ ನಲ್ಲಿ...
ಡಿಸಿಎಂ ಬೇಡ ಕೇಂದ್ರ ಸಚಿವರಾಗಿ
ಬೆಂಗಳೂರು: ಉಪಮುಖ್ಯ ಮಂತ್ರಿ ಸ್ಥಾನವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಅವರಿಗೆ ನೀಡಲು ರಾಹಲ್ ಗಾಂಧಿ ನಿರಾಕರಿಸಿದ್ದು, ಕೇಂದ್ರ ಸಚಿವ ಸಂಪುಟಕ್ಕೆ ಸೇರಿ ಉತ್ತಮ ಖಾತೆ ಪಡೆದು ಕೆಲಸ ನಿರ್ವಹಿಸಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಎಂಪಿಗಳಿಗೆ ಕುಟುಂಬದವರೇ ಪಿಎಗಳು!
ಬೆಂಗಳೂರು: ರಾಜ್ಯದ ಐವರು ಎಂಪಿಗಳು ಆಪ್ತ ಸಹಾಯಕ ಹುದ್ದೆಗೆ ಸಂಬಂಧಿಕರನ್ನೇ ನೇಮಕ ಮಾಡಿಕೊಳ್ಳುವ ಮೂಲಕ ಕುಟುಂಬದ ಹಿತ ಕಾಪಾಡುತ್ತಿರುವ ಕುತೂಹಲಕಾರಿ ಅಂಶ ಬೆಳಕಿಗೆ ಬಂದಿದೆ.
ಪತ್ನಿಯನ್ನೆ ಕೊಂದು ಪರಾರಿಯಾಗಿದ್ದ ಪೇದೆ ಸೆರೆ
ಮೈಸೂರು: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ವಿದ್ಯಾರಣ್ಯಪುರಂ ಠಾಣೆಯ ಪೊಲೀಸ್ ಪೇದೆ ಜಿ.ಸಿ.ಮಹೇಂದ್ರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪೊಲೀಸರು ವಶಕ್ಕೆ ನೀಡಲಾಗಿದೆ.
ಕಾಂಗ್ರೆಸ್ ನಿಂದ ದಲಿತ ಮುಖಂಡರ ತುಳಿಯುವ ಯತ್ನ: ಸೋಮಶೇಖರ್
ಮೈಸೂರು: ಸ್ವಾತಂತ್ರ್ಯ ನಂತರ ಕಾಂಗ್ರೆಸ್ಸನ್ನೇ ಬೆಂಬಲಿಸಿಕೊಂಡು ಬಂದ ದಲಿತ ಮುಖಂಡರ ಬೆನ್ನಿಗೆ ಚೂರಿ ಹಾಕುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಬಿ.ಸೋಮಶೇಖರ್ ಹೇಳಿದರು.
ಚಿದಂಬರಂ-ಸಿದ್ದರಾಮಯ್ಯ ಮಾತುಕತೆ..!
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಜನ ಹಲವು ನಿರೀಕ್ಷೆಗಳನ್ನಿಟ್ಟುಕೊಂಡಿದ್ದು, ಅದನ್ನು ಸಾಕಾರಗೊಳಿಸುವಲ್ಲಿ ತಮ್ಮ ಸಹಕಾರದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಕಾಸು..
ಸಿಎಂ ಸಿದ್ದುಗೆ ಬಿಜೆಪಿ ಶಾಸಕರ ಅಭಿನಂದನೆ
ಬೆಂಗಳೂರು: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿದ ಬಿಜೆಪಿ ಶಾಸಕರಾದ ಸಿ.ಟಿ.ರವಿ, ಜೀವರಾಜ್, ಅಪ್ಪಚ್ಚುರಂಜನ್ ಅಭಿನಂದನೆ ಸಲ್ಲಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
ಹಳ್ಳಕ್ಕೆ ಉರುಳಿದ ಟೆಂಪೋ ಟ್ರಾಕ್ಸ್: ಕಾರ್ಮಿಕರಿಗೆ ಗಾಯ
ಹುಣಸೂರು: ಟೆಂಪೊ ಟ್ರಾಕ್ಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಮಗಚಿದ ಪರಿಣಾಮ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಸಮೀಪದ ವೀರನಹೊಸಹಳ್ಳಿಯ ಭರತವಾಡಿ ಗ್ರಾಮದಲ್ಲಿ ನಡೆದಿದೆ.
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಶ್ರೀಶಾಂತ್ ಹೋಟೆಲ್ ರೂಮ್ ಗೆ ಪೊಲೀಸ್ ದಾಳಿ
ಮುಂಬಯಿ: ಮುಂಬಯಿ ಪೊಲೀಸರು ಶನಿವಾರ ಪಂಚತಾರಾ ಹೋಟೆಲ್ ಒಂದರ ಮೇಲೆ ದಾಳಿ ಮಾಡಿ ಸ್ಪಾಟ್ ಫಿಕ್ಸಿಂಗ್ ನಲ್ಲಿ ಬಂಧಿತನಾಗಿರುವ ರಾಜಸ್ಥಾನ ರಾಯಲ್ಸ್ ನ ಆಟಗಾರ ಎಸ್. ಶ್ರೀಶಾಂತ್ ಗೆ ಸಂಬಂಧಪಟ್ಟ ಲ್ಯಾಪ್ ಟಾಪ್
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ನೂತನ ಸಚಿವರ ಪ್ರಮಾಣ ವಚನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಇಂದು ಅಸ್ಥಿತ್ವಕ್ಕೆ ಬರಲಿದ್ದು, ಬೆಳಿಗ್ಗೆ 10.30ಕ್ಕೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ 29 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸ್ಪಾಟ್ ಫಿಕ್ಸಿಂಗ್: ಕರ್ನಾಟಕದ ಅಮಿತ್ ಸಿಂಗ್ ಸೆರೆ
ಹೊಸದಿಲ್ಲಿ: ಐಪಿಎಲ್ ನಲ್ಲಿ ತಲ್ಲಣವನ್ನು ಉಂಟು ಮಾಡಿರುವ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಬುಕ್ಕಿಗಳು ಮತ್ತು ಆಟಗಾರರ ಮಧ್ಯವರ್ತಿಯಾಗಿದ್ದ ರಾಜಸ್ಥಾನ ರಾಯಲ್ಸ್ ನ ಮಾಜಿ ವೇಗಿ ಅಮಿತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನಾನು ನಿರ್ದೋಷಿ, ಹಗರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ: ಶ್ರೀಶಾಂತ್
ಹೊಸದಿಲ್ಲಿ: ಐಪಿಎಲ್ ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಸಿಲುಕಿರುವ ವೇಗಿ ಶ್ರೀಶಾಂತ್, ತಾನು ನಿರ್ದೋಷಿ ಮತ್ತು ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ದೆಹಲಿ ಕೋರ್ಟ್ ಮುಂದೆ ಹೇಳಿದರು.
ಲಾಕೆಟ್, ಕರ್ಚಿಫ್ ಸ್ಪಾಟ್ ಫಿಕ್ಸಿಂಗ್ ಸಂಕೇತಗಳು!
ನವದೆಹಲಿ: ಐಪಿಎಲ್ ನಲ್ಲಿ ಸ್ಫಾಟ್ ಫಿಕ್ಸಿಂಗ್ ನಲ್ಲಿ ನಡೆಸಿದ ಆರೋಪದ ಮೇಲೆ ಬಂಧಿತರಾಗಿರುವ ರಾಜಸ್ಥಾನ ರಾಯಲ್ಸ್ ತಂಡದ ಎಸ್. ಶ್ರೀಶಾಂತ್, ಅಜಿತ್ ಚಾಂಡಿಲಾ ಮತ್ತು ಅಂಕಿತ್ ಚೌವ್ಹಾಣ್ ಬುಕ್ಕಿಗಳಿಗೆ ನಿರ್ದೇಶನ ನೀಡಲು ವಿವಿಧ
ನಾಳೆ ಸಚಿವರ ಪ್ರಮಾಣ ವಚನ?
ಬೆಂಗಳೂರು: ಸಚಿವ ಸಂಪುಟಕ್ಕೆ 22 ಸಚಿವರನ್ನು ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ಸೂಚಿಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ದಟ್ಟವಾಗಿದೆ.
ಮೊದಲ ಮಹಿಳಾ ಯೋಧೆ ಸಂಶಯಾಸ್ಪದ ಸಾವು
ನವದೆಹಲಿ: ಭಾರತೀಯ ಸೇನೆಯ ಮೊದಲ ಮಹಿಳಾ ಯೋಧೆ ಶಾಂತಿ ತಿಗ್ಗಾ(37) ಅವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಈ ಬಗ್ಗೆ ಹಲವಾರು ಸಂಶಯಗಳು ಕಾಡಲಾರಂಭಿಸಿದೆ.
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.
ಸ್ಯಾಂಡಲ್ ವುಡ್ ನಲ್ಲಿ ಮತ್ತೊಬ್ಬ ಸರ್ಜಾ
ಕನ್ನಡದವರೇ ಆಗಿರುವ ತಮಿಳು, ತೆಲುಗು ಚಿತ್ರರಂಗದಲ್ಲಿ ವಿಶೇಷವಾಗಿ ಹೆಸರು ಮಾಡಿರುವ, ಬಹುಮುಖ್ಯವಾಗಿ ಈ ವರ್ಷ ಕನ್ನಡದ ಪ್ರಸಾದ್ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಈ ವರ್ಷದ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು...
ಬನ್ನಿ ಬಿಳಿಗಿರಿರಂಗನ ಬೆಟ್ಟಕ್ಕೆ...... ನಿಸರ್ಗದ ಸ್ವರ್ಗಕ್ಕೆ......
ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲೊಂದಾದ ಬಿಳಿಗಿರಿರಂಗನ ಬೆಟ್ಟವು ಮೈಸೂರಿನಿಂದ ಸುಮಾರು ತೊಂಬತ್ತು ಕಿ.ಮೀ. ಹಾಗೂ ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ಸುಮಾರು 15ಕಿಮೀ ದೂರದಲ್ಲಿದೆ.

Write Your Comment Here...