ಪಿಂಕಿ ಲಿಂಗ ಪರೀಕ್ಷೆ ಎಂಎಂಎಸ್ ಅಂತರ್ಜಾಲದಲ್ಲಿ!
[Updated 03/07/2012 04:11 pm]ಕೊಲ್ಕತ್ತಾ: ಅತ್ಯಾಚಾರ ಮಾಡಿದ್ದಾಗಿ ಬಂಧನಕ್ಕೆ ಒಳಗಾಗಿರುವ ಏಶ್ಯಡ್ ನಲ್ಲಿ ಸ್ವರ್ಣ ಪದಕ ವಿಜೇತೆ ಅಥ್ಲೆಟಿಕ್ ಪಿಂಕಿ ಪ್ರಾಮಾಣಿಕ್ ಲಿಂಗ ಪರೀಕ್ಷೆಗೆ ಒಳಪಡುವ ಎಂಎಂಎಸ್ ತುಣುಕು ಅಂತರ್ಜಾಲದಲ್ಲಿ ತಲ್ಲಣವನ್ನು ಉಂಟು ಮಾಡಿದೆ.
ಪಿಂಕಿ ಖಾಸಗಿ ಕ್ಲಿನಿಕ್ ನಲ್ಲಿ ಲಿಂಗ ಪರೀಕ್ಷೆಗೆ ಒಳಗಾದ 29 ನಿಮಿಷಗಳ ಎಂಎಂಎಸ್ ಈಗ ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಎಂಎಂಎಸ್ ನಲ್ಲಿ ಪಿಂಕಿ ಸಂಪೂರ್ಣವಾಗಿ ನಗ್ನಳಾ(ವಾ)ಗಿದ್ದಾಳೆ. ನೆಟ್ ನಲ್ಲಿ ಈ ವೀಡಿಯೋ ಕ್ಲಿಪ್ ನ್ನು ಅತ್ಯಧಿಕ ಮಂದಿ ವೀಕ್ಷಿಸುತ್ತಿದ್ದಾರೆ.
ನಾನು ವೀಡಿಯೋ ಕ್ಲಿಪ್ ಬಗ್ಗೆ ಕೇಳಿದ್ದೇನೆ. ಆದರೆ ಅದನ್ನು ನೋಡಿಲ್ಲ. ಇಂತಹ ಹೀನ ಕೃತ್ಯವನ್ನು ಮಾಡಿರುವವರನ್ನು ತಕ್ಷಣ ಬಂಧಿಸಬೇಕು. ಈ ಬಗ್ಗೆ ಪೊಲೀಸರಿಗೆ ದೂರು ನೀಡಬೇಕಾಗಿದೆ. ಆದರೆ ಪಿಂಕಿ ಈಗ ಜೈಲಿನಲ್ಲಿರುವ ಕಾರಣ ಆಕೆಯ ಮನೆಯವರು ಯಾರು ಕೂಡ ದೂರು ನೀಡಲು ಮುಂದೆ ಬರುತ್ತಿಲ್ಲ ಎಂದು ಪಿಂಕಿಯ ವಕೀಲರಾಗಿರುವ ತುಹಿನ್ ರಾಯ್ ತಿಳಿಸಿದರು.
ಜುಲೈ 12ರಂದು ನಡೆಯಲಿರುವ ವಿಚಾರಣೆ ವೇಳೆ ಈ ವಿಷಯವನ್ನು ತಾನು ಕೋರ್ಟಿನಲ್ಲಿ ಪ್ರಸ್ತಾಪಿಸುತ್ತೇನೆ ಎಂದು ರಾಯ್ ಹೇಳಿದರು. ಆದರೆ ಅಧಿಕೃತ ದೂರು ಬಂದರೆ ಮಾತ್ರ ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಅತ್ಯಾಚಾರ ಮಾಡಿರುವುದಾಗಿ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ಪಿಂಕಿಯನ್ನು ಬಂಧಿಸಿದ್ದಾರೆ. ಆದರೆ ಪಿಂಕಿ ಮಹಿಳಾ ಅಥ್ಲೆಟಿಕ್ ಆಗಿ ಸ್ಪರ್ಧಿಸಿದ್ದು, ಈ ಕಾರಣದಿಂದ ಆಕೆಯನ್ನು ಲಿಂಗ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
Pinky gender test MMS goes viral
Kolkata: An MMS clipping showing Asian gold medalist athlete Pinky Pramanik completely nude during her gender test, in the wake of allegation of rape, has gone viral on the internet.
ಋತುವಿನ ಅಂತ್ಯದಲ್ಲಿ ಬೇಕಮ್ ಫುಟ್ಬಾಲ್ ನಿಂದ ನಿವೃತ್ತಿ
ಲಂಡನ್: ಇಂಗ್ಲೆಂಡ್ ನ ಮಾಜಿ ಫುಟ್ಬಾಲ್ ಆಟಗಾರ ಡೇವಿಡ್ ಬೇಕಮ್ ವೃತ್ತಿಪರ ಫುಟ್ಬಾಲ್ ನಿಂದ ಈ ಋತುವಿನ ಅಂತ್ಯದಲ್ಲಿ ನಿವೃತ್ತಿ ಘೋಷಿಸಲಿದ್ದಾರೆ. 38ರ ಹರೆಯದ ಬೇಕಮ್ ಅವರು ಮ್ಯಾಂಚೆಸ್ಟರ್
ವಿಜೇಂದರ್ ಪರೀಕ್ಷೆ ನಡೆಸಲು ನಿರಾಕರಿಸಿದ ನಾಡಾ
ಕ್ರೀಡಾ ಸಚಿವಾಲಯದ ಮನವಿಯನ್ನು ತಿರಸ್ಕರಿಸಿರುವ ನ್ಯಾಶನಲ್ ಆ್ಯಂಟಿ ಡೊಪಿಂಗ್ ಏಜೆನ್ಸಿ(ನಾಡಾ) ಬಾಕ್ಸರ್ ವಿಜೇಂದರ್ ಸಿಂಗ್ ರ ಹೆರಾಯಿನ್ ಪರೀಕ್ಷೆ ನಡೆಸಲು ನಿರಾಕರಿಸಿದೆ.
ಏಳನೇ ಸಲ ಅಜ್ಲಾನ್ ಷಾ ಹಾಕಿ ಟೂರ್ನಿ ಗೆದ್ದ ಆಸ್ಟ್ರೇಲಿಯಾ
ಸುಲ್ತಾನ್ ಅಜ್ಲಾನ್ ಷಾ ಹಾಕಿ ಟೂರ್ನಮೆಂಟ್ ನಲ್ಲಿ ತನ್ನ ಪ್ರಾಬಲ್ಯವನ್ನು ಮೆರೆದ ಆಸ್ಟ್ರೇಲಿಯಾ ಆತಿಥೇಯ ಮಲೇಶಿಯಾ ವಿರುದ್ಧ 3-2ರ ಗೆಲುವು ದಾಖಲಿಸಿಕೊಂಡು ಏಳನೇ ಸಲ ಪ್ರಶಸ್ತಿ ಗೆದ್ದುಕೊಂಡಿದೆ.
ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತ
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 3-1ರಿಂದ ಗೆಲುವು ದಾಖಲಿಸಿಕೊಂಡ ಭಾರತ ಸುಲ್ತಾನ್ ಅಜ್ಲಾನ್ ಷಾ ಹಾಕಿ ಟೂರ್ನಮೆಂಟ್ ನಲ್ಲಿ ಅಂಕದ ಖಾತೆ ತೆರೆದು ಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ.
ಅಜ್ಲಾನ್ ಷಾ ಹಾಕಿ: ಇಂದು ಭಾರತ-ಪಾಕ್ ಸೆಣಸಾಟ
ಕಳೆದ ಎರಡು ಪಂದ್ಯಗಳಲ್ಲಿ ಸೋಲುಂಡಿರುವ ಭಾರತ ಮಂಗಳವಾರ(ಇಂದು) ನಡೆಯಲಿರುವ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ರೌಂಡ್ ರಾಬಿನ್ ಪಂದ್ಯವನ್ನು ಗೆದ್ದರೆ ಮಾತ್ರ ಸುಲ್ತಾನ್ ಅಜ್ಲಾನ್ ಷಾ ಹಾಕಿ ಟೂರ್ನಮೆಂಟ್ ನಲ್ಲಿ ಸ್ಪರ್ಧೆಯಲ್ಲಿ ಉಳಿಯಬಹುದಾಗಿದೆ.
ಸೈನಾ ನೆಹ್ವಾಲ್ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಸೆಮಿಫೈನಲಿಗೆ
ವಿಶ್ವದ ಎರಡನೇ ಕ್ರಮಾಂಕದ ಆಟಗಾರ್ತಿ ಸೈನಾ ನೆಹ್ವಾಲ್ ಆರನೇ ಶ್ರೇಯಾಂಕದ ಚೀನಾದ ಶಿಕ್ಸಿಯಾನ್ ವಾಂಗ್ ವಿರುದ್ಧ 23-21, 19-21, 21-16ರಿಂದ ಗೆಲುವು ದಾಖಲಿಸಿಕೊಂಡ...
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಸೈನಾ ಪ್ರೀಕ್ವಾರ್ಟರ್ ಫೈನಲಿಗೆ
ಒಲಿಂಪಿಕ್ಸ್ ನ ಕಂಚಿನ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಕಠಿಣ ಹೋರಾಟದಲ್ಲಿ ಥಾಯ್ ಲೆಂಡ್ ನ ಸಪ್ಸೈರಿ ತರಟ್ಟನಚೈ ವಿರುದ್ಧ ಗೆಲುವು ದಾಖಲಿಸಿಕೊಂಡು ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ....
ಹತ್ಯೆಯಾದ ಪಿಸ್ಟೋರಿಯಸ್ ಪ್ರಿಯತಮೆ ಗರ್ಭಿಣಿಯಾಗಿದ್ದಳು!
ಪ್ಯಾರಾಲಂಪಿಕ್ ಅಥ್ಲೆಟಿಕ್ ಆಸ್ಕರ್ ಪಿಸ್ಟೋರಿಯಸ್ ನಿಂದ ಹತ್ಯೆಗೀಡಾದ ಆತನ ಗೆಳತಿ ರೀವಾ ಸ್ಟೀನ್ಕಪ್ ಗರ್ಭಿಣಿಯಾಗಿದ್ದಳು ಎನ್ನುವ ಮಾಹಿತಿ ಬಹಿರಂಗವಾಗಿದೆ.
ಮಲೇಷ್ಯಾಗೆ ಹಾಕಿ ತಂಡ ಕಳುಹಿಸಲು ಸರ್ಕಾರದ ಬಳಿ ಹಣವಿಲ್ಲ!
ನಮ್ಮ ರಾಷ್ಟ್ರಕ್ರೀಡೆ ಹಾಕಿಯ ಪರಿಸ್ಥಿತಿ ಎಷ್ಟು ಕೆಟ್ಟದಾಗಿದೆಯೆಂದರೆ ಪ್ರಮುಖ ಟೂರ್ನಿಯಾದ ಅಜ್ಲಾನ್ ಷಾ ಹಾಕಿ ಟೂರ್ನಮೆಂಟ್ ನಲ್ಲಿ ಭಾಗವಹಿಸಲು ಹೋಗುವ ತಂಡದ ಪ್ರಯಾಣ ವೆಚ್ಚವನ್ನು ಭರಿಸಲು
ದ್ವಿತೀಯ ರ್ಯಾಂಕ್ ಗೆ ಜಿಗಿದ ಸೈನಾ ನೆಹ್ವಾಲ್
ಒಲಿಂಪಿಕ್ಸ್ ನ ಕಂಚಿನ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್(ಬಿಡಬ್ಲ್ಯೂಎಫ್) ಬಿಡುಗಡೆ ಮಾಡಿ ರ್ಯಾಂಕಿಂಗ್ ನಲ್ಲಿ ಜೀವನಶ್ರೇಷ್ಠ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.
ಸ್ಪಾಟ್ ಫಿಕ್ಸಿಂಗ್: ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಬಂಧನ
ಹೊಸದಿಲ್ಲಿ: ಬಾಲಿವುಡ್ ಮತ್ತು ಸ್ಪಾಟ್ ಫಿಕ್ಸಿಂಗ್ ಲಿಂಕ್ ಒಂದೊಂದಾಗಿ ಬಯಲಾಗುತ್ತಿದ್ದು, ಜನಪ್ರಿಯ ನಟ, ಕುಸ್ತಿಪಟು, ದಿವಂಗತ ದಾರಾ ಸಿಂಗ್ ಅವರ ಪುತ್ರ ವಿಂದೂ ದಾರಾ ಸಿಂಗ್ ನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಐಪಿಎಲ್ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ನಕಾರ
ಹೊಸದಿಲ್ಲಿ: ಸ್ಪಾಟ್ ಫಿಕ್ಸಿಂಗ್ ನಿಂದಾಗಿ ಐಪಿಎಲ್ ನ ಮುಂದಿನ ಪಂದ್ಯಗಳಿಗೆ ತಡೆ ಹೇರಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಕೆಲವು ಆಟಗಾರರು ಅಕ್ರಮದಲ್ಲಿ ತೊಡಗಿದ್ದಾರೆಂಬ ಕಾರಣಕ್ಕೆ ಐಪಿಎಲ್ ನ್ನು ಸಂಪೂರ್ಣವಾಗಿ
ಅಗ್ಗದ ಮದ್ಯ ಮಾರಾಟ ಮಾಡಿದರೆ ಪ್ರತಿಭಟನೆ
ಬೆಂಗಳೂರು: ಮತ್ತೆ ರಾಜ್ಯದಲ್ಲಿ ಅಗ್ಗದ ಮದ್ಯ ಮಾರಾಟ ಮಾಡಲು ಸರ್ಕಾರ ಮುಂದಾದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಎಚ್ಚರಿಕೆ ನೀಡಿದ್ದಾರೆ.
ಅದೃಷ್ಟದ ಕೊಠಡಿಗಾಗಿ ಸಚಿವರ ಕಿತ್ತಾಟ
ಬೆಂಗಳೂರು: ಹೋರಾಟದ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಚಿವರು ಇದೀಗ ವಿಧಾನಸೌಧದಲ್ಲಿ ತಮ್ಮ ಅದೃಷ್ಟದ ಕಚೇರಿ ಮತ್ತು ಬಂಗಲೆಗಾಗಿ ಕಿತ್ತಾಟ ಆರಂಭಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ರಕ್ತ ಹರಾಜಿಗೆ!
ಲಂಡನ್: ಲಂಡನ್ ಮೂಲದ ಜಾಗತಿಕ ಹರಾಜು ಸಂಸ್ಥೆ ಮುಲ್ಲೊಕ್ಸ್ ಮಂಗಳವಾರ ಮಹಾತ್ಮ ಗಾಂಧಿ ಅವರಿಗೆ ಸಂಬಂಧಪಟ್ಟಿರುವ ಕೆಲವು ಮಹತ್ವದ ವಸ್ತುಗಳನ್ನು ಹರಾಜು ಹಾಕಲಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಒಂದಾ ಈ...
ಭಾರತ-ಚೀನಾ ಗಡಿ ವಿವಾದದ ಮಾತುಕತೆ ಯಶಸ್ವಿ
ಹೊಸದಿಲ್ಲಿ: ಅತ್ಯಂತ ಮಹತ್ವದ ಭಾರತ ಮತ್ತು ಚೀನಾ ಗಡಿ ವಿವಾದ ಸಹಿತ ಹಲವಾರು ವಿಷಯಗಳ ಚರ್ಚೆ ಯಶಸ್ವಿಯಾಗಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದರು.
ಖಾತೆಗಳ ಹಂಚಿಕೆ: ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತುಕೊಂಡ ಸಿಎಂ
ಬೆಂಗಳೂರು: ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಹಂಚಿಕೆಯಾಗಬೇಕಿದ್ದ ಖಾತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹಂಚಿಕೆ ಮಾಡಿದ್ದು, ಪ್ರಮುಖ ಖಾತೆಗಳಾದ ಇಂಧನ ಹಾಗೂ ಹಣಕಾಸು....
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.

Write Your Comment Here...